ನ.13ಕ್ಕೆ ಅನರ್ಹ ಶಾಸಕರ ತೀರ್ಪು ಪ್ರಕಟಿಸಲಿರುವ ಸುಪ್ರೀಂ..!

ನವದೆಹಲಿ:

     ಇಡೀ ರಾಜ್ಯದ ಗಮನ ಸೆಳೆದ 17 ಅನರ್ಹ ಶಾಸಕರ ಅರ್ಜಿ ಕುರಿತು ಸುಪ್ರೀಂ ಕೋರ್ಟ್ ನವೆಂಬರ್ 13ರಂದು ತೀರ್ಪು ಪ್ರಕಟಿಸಲಿದೆ.ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ನ್ಯಾ.ಎನ್. ವಿ ರಮಣ ನೇತೃತ್ವದ ತ್ರಿಸದಸ್ಯ ಪೀಠ, 10 ದಿನಗಳ ಬಳಿಕ ತೀರ್ಪು ಪ್ರಕಟಿಸುವುದಾಗಿ ಹೇಳಿತ್ತು. ಇಂದು ತೀರ್ಪು ಪ್ರಕಟಿಸುವ ದಿನಾಂಕ ನಿಗದಿ ಮಾಡಿದ್ದು, ಬಧವಾರ ಬೆಳಗ್ಗೆ 10:30ಕ್ಕೆ ತೀರ್ಪು ಪ್ರಕಟಿಸುವುದಾಗಿ ತಿಳಿಸಿದ್ದಾರೆ.

     ಅನರ್ಹ ಶಾಸಕರ ತೀರ್ಪು ಪ್ರಕಟಣೆಗಾಗಿ ಸುಪ್ರೀಂ ಕೋರ್ಟ್‌‌ನ ಪಟ್ಟಿಯಲ್ಲಿ ಪ್ರಕರಣ ಸಂಖ್ಯೆ ಹಾಗೂ ವಾದಿ – ಪ್ರತಿವಾದಿಗಳ ಹೆಸರನ್ನು ಪಟ್ಟಿಯಲ್ಲಿ ಪ್ರಕಟಿಸಲಾಗಿದೆ.ಅನರ್ಹ ಶಾಸಕರ ಅರ್ಜಿ ಕುರಿತು ಈಗಾಗಲೇ ವಾದ – ಪ್ರತಿವಾದ ಆಲಿಸಿದ ಕೋರ್ಟ್ ತೀರ್ಪು ಕಾಯ್ದಿರಿಸಿದ್ದು, ತೀರ್ಪಿಗಾಗಿ ಅನರ್ಹ ಶಾಸಕರು ಕಾಯುತ್ತಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link