ಬೆಂಗಳೂರು:
ಮೆಟ್ರೋ ಕಾಮಗಾರಿ ವೇಳೆ ನಡೆದ ಅವಗಢದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಘಟನೆ ನ. 7ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಒಡಿಶಾ ಮೂಲದ ಸಮೀರ್ ಕಾಂತೋ ಸೇನಾಪತಿ(24) ಮೃತ ಕಾರ್ಮಿಕ. ಎಲೆಕ್ಟ್ರಾನಿಕ್ ಸಿಟಿ ಸಮೀಪದ ವೀರಸಂದ್ರ ಸಿಗ್ನಲ್ ಬಳಿ ‘ನಮ್ಮ ಮೆಟ್ರೊ’ ಎರಡನೇ ಹಂತದ ಯೋಜನೆಯಡಿ ಇಲ್ಲಿ ಹುಸ್ಕೂರು ಮೆಟ್ರೊ ನಿಲ್ದಾಣ ನಿರ್ಮಿಸಲಾಗುತ್ತಿದೆ. ಕಾಮಗಾರಿ ವೇಳೆ ಚೈನ್ಪುಲ್ಲಿ ಸಹಾಯಹಿಂದ ಕ್ರಷ್ ಅನ್ನು ಇಳಿಸುತ್ತಿದ್ದಾಗ ಚೈನ್ ತುಂಡಾಗಿದೆ. ಕಾರ್ಮಿಕರ ಮೇಲೆ ಕಬ್ಬಿಣದ ಕ್ರಷ್ ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದರು.
ಗಾಯಾಳುಗಳನ್ನು ತಕ್ಷಣವೇ ಸೇಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಮರುದಿನ ಸಮೀರ್ ಕಾಂತೋ ಮೃತಪಟ್ಟಿದ್ದಾರೆ.
ಈ ದುರ್ಘಟನೆಗೆ ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್ಸಿಎಲ್) ಕಾರಣ. ಅಗತ್ಯ ಸುರಕ್ಷತಾ ಕ್ರಮ ವಹಿಸದ ಕಾರಣ ದುರಂತ ಸಂಭವಿಸಿದೆ. ಕಾರ್ಮಿಕರಿಗೆ ಭದ್ರತೆ ಒದಗಿಸದೆ, ನಿರ್ಲಕ್ಷ್ಯ ತೋರಿದ ಬಿಎಂಆರ್ಸಿಎಲ್ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ಮೃತನ ಸಂಬಂಧಿ ಅಮಿತಾಬ್ ದಾಸ್ ದೂರಿನಲ್ಲಿ ಆಗ್ರಹಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
