ನ.15ಕ್ಕೆ ಸಂತಶ್ರೇಷ್ಠ ಕನಕದಾಸರ ಅದ್ದೂರಿ ಜಯಂತಿ

ಚಿತ್ರದುರ್ಗ :

    ಜಿಲ್ಲಾ ಕೇಂದ್ರದಲ್ಲಿ ನ. 15 ರಂದು ಸಂತ ಶ್ರೇಷ್ಠ ಕನಕದಾಸರ ಜಯಂತಿ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಆರ್. ವಿನೋತ್ ಪ್ರಿಯಾ ಹೇಳಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಕನಕದಾಸರ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಕನಕದಾಸರ ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ 9 ಕ್ಕೆ ನಗರದ ಕನಕವೃತ್ತದಲ್ಲಿ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಂತರ ಕನಕದಾಸರ ಭಾವಚಿತ್ರದೊಂದಿಗೆ ಮೆರವಣಿಗೆಗೆ ಚಾಲನೆ ನೀಡಲಾಗುತ್ತದೆ. ಮೆರವಣಿಗೆಯು ವಿವಿಧ ಸಾಂಸ್ಕೃತಿಕ ಕಲಾತಂಡ ಗಳೊಂದಿಗೆ ಕನಕದಾಸ ವೃತ್ತದಿಂದ ಆರಂಭವಾಗಿ, ಗಾಂಧಿವೃತ್ತ, ಮೈಸೂರು ಬ್ಯಾಂಕ್, ಅಂಬೇಡ್ಕರ್ ವೃತ್ತ ಮಾರ್ಗವಾಗಿ, ಮಧ್ಯಾಹ್ನ 12 ಕ್ಕೆ ತ.ರಾ.ಸು ರಂಗಮಂದಿರ ಸೇರುವುದು. 12 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯುತ್ತದೆ ಎಂದು ಅವರು ತಿಳಿಸಿದರು.

    ಕಾರ್ಯಕ್ರಮದ ಮುನ್ನಾದಿನದಂದು ಕನಕ ವೃತ್ತಕ್ಕೆ ಬಣ್ಣ ಹಾಗೂ ಸ್ವಚ್ಚತೆ ಕಾರ್ಯ ನಡೆಸಲಾಗುತ್ತದೆ ಎಂದರು. ಕನಕದಾಸರ ಕುರಿತು ವಿಶೇಷ ಉಪನ್ಯಾಸ ನೀಡಲು ಸಂಪನ್ಮೂಲ ವ್ಯಕ್ತಿಗಳನ್ನು ಆಹ್ವಾನಿಸಲಾಗುವುದು. ಕಾರ್ಯಕ್ರಮದಲ್ಲಿ ಎಲ್ಲ ಅಧಿಕಾರಿ, ಸಿಬ್ಬಂದಿಗಳು ತಪ್ಪದೆ ಭಾಗವಹಿಸುವಂತೆ ನಿರ್ದೇಶನ ನೀಡಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

    ಜಿಲ್ಲಾ ಕುರುಬ ಸಮಾಜದ ಪ್ರಧಾನ ಕಾರ್ಯದರ್ಶಿ ಬಿ.ಹೆಚ್. ಗೌಡ್ರು ಮಾತನಾಡಿ, ಕನಕದಾಸರ ಜಯಂತಿ ಅಂಗವಾಗಿ ನ. 14 ರಂದು ನಗರದಲ್ಲಿ ಬೈಕ್ ರ್ಯಾಲಿ ಆಯೋಜಿಸಿದ್ದು, ಸುಮಾರು 300 ರಿಂದ 400 ಜನರು ಬೈಕ್‍ನೊಂದಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಲಾಗುತ್ತದೆ. ನ.15 ರಂದು ವಿಶೇಷ ಸಮವಸ್ತ್ರ ತೊಟ್ಟ ಮಹಿಳೆಯರಿಂದ ಪೂರ್ಣಕುಂಭ ಮೆರವಣಿಗೆ ಕಾರ್ಯಕ್ರಮವಿರುತ್ತದೆ. ಕನಕದಾಸರು ಯಾವುದೇ ಒಂದು ಜಾತಿಗೆ ಸೀಮಿತರಲ್ಲ, ಅವರು ವಿಶ್ವಮಾನವರು. ಹೀಗಾಗಿ ಕಾರ್ಯಕ್ರಮಗಳಲ್ಲಿ ಎಲ್ಲ ಸಮುದಾಯದವರು ಭಾಗವಹಿಸಬೇಕು ಎಂದು ಮನವಿ ಮಾಡಿದರು.

     ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿ. ಸಂಗಪ್ಪ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ನಿಜಲಿಂಗಪ್ಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾಗರಾಜ್, ಜಿಲ್ಲಾ ಕುರುಬ ಸಂಘದ ಅಧ್ಯಕ್ಷ ಶ್ರೀರಾಮ್, ಜಿಲ್ಲಾ ಮಹಿಳಾ ಕುರುಬ ಸಮಾಜದ ಅಧ್ಯಕ್ಷೆ ಪಿ.ಕೆ ಮೀನಾಕ್ಷಿ ನ ನಗರಸಭೆ ಮಾಜಿ ಸದಸ್ಯ ರವಿಶಂಕರ ಬಾಬು, ಕರಿಯಪ್ಪ, ಮಂಜಪ್ಪ ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap