ಬೆಂಗಳೂರು:
ಮಾಜಿ ಸಚಿವ ಕೆಜೆ ಜಾರ್ಜ್ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ಪ್ರಕರಣ ದಾಖಲು ಮಾಡಿಕೊಂಡು ತನಿಖೆಯನ್ನು ಕೈಗೊಂಡಿದೆ.
ಕರ್ನಾಟಕ ರಾಷ್ಟ್ರ ಸಮಿತಿ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ ಜಾರಿ ನಿರ್ದೇಶನಾಲಯಕ್ಕೆ ಕೆ.ಜೆ.ಜಾರ್ಜ್ ವಿರುದ್ಧ ದೂರು ನೀಡಿದ್ದು, “ಕೆ.ಜೆ. ಜಾರ್ಜ್ ಸಚಿವರಾಗಿದ್ದಾಗ ದೇಶ ವಿದೇಶಗಳಲ್ಲಿ ಭಾರಿ ಪ್ರಮಾಣದ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ” ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ವಿದೇಶದಲ್ಲಿ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ(ಫೇಮಾ) ಅಡಿ ಇಡಿ ಪ್ರಕರಣ ದಾಖಲಿಸಿದ್ದು, ಈಗ ಜಾರ್ಜ್ ಹೊಂದಿರುವ ಆಸ್ತಿಯ ಅಧಿಕೃತ ಮಾಹಿತಿಯನ್ನು ಅಧಿಕಾರಿಗಳು ಸಂಗ್ರಹಿಸುತ್ತಿದ್ದಾರೆ.
ಜಾರ್ಜ್ ಸಲ್ಲಿಸಿದ್ದ ಆಸ್ತಿ ವಿವರವನ್ನೇ ಆಧಾರವಾಗಿಟ್ಟುಕೊಂಡು ಇಡಿ ತನಿಖೆ ನಡೆಸಲಿದೆ. ಈಗಾಗಲೇ ಇಡಿ ಮನವಿಗೆ ಸ್ಪಂದಿಸಿರುವ ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ಹಸ್ತಾಂತರ ಮಾಡಿದ್ದಾರೆ. ಈಗ ಲೋಕಾಯುಕ್ತಕ್ಕೆ ಸಲ್ಲಿಸಿದ್ದ ಆಸ್ತಿ ವಿವರ ಮತ್ತು ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಅಫಿಡವಿಟ್ ಅನ್ನು ತಾಳೆ ಮಾಡಲಾಗುತ್ತಿದೆ ಎನ್ನಲಾಗಿದೆ. ಒಂದೊಮ್ಮೆ ತಾಳೆ ಆಗದಿದ್ದಲ್ಲಿ ಜಾರ್ಜ್ಗೆ ಸಂಕಷ್ಟ ಎದುರಾಗಬಹುದು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ