ಬೆಂಗಳೂರು :
ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಇಂದು ಭೇಟಿಯಾಗುವ ಮೂಲಕ ಕುತೂಹಲಕ್ಕೆ ಕಾರಣರಾಗಿದ್ದಾರೆ.
ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ಧವಳಗಿರಿ ನಿವಾಸಕ್ಕೆ ಭೇಟಿ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್ ಜೊತೆ ಜೊತೆ ಕೈ ನಾಯಕಿ ಮೋಟಮ್ಮ ಮತ್ತು ಮೋಟಮ್ಮ ಪುತ್ರಿ ನಯನಾ ಮೋಟಮ್ಮ ಸಹ ಇದ್ದರು.
ಶಾಸಕಿಯಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಮುಖ್ಯಮಂತ್ರಿಗಳನ್ನು ಭೇಟಿ ಮಾಡುವುದು ಸಹಜವಾದರೂ ಸಹ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಸರ್ಕಾರ ಪತನಗೊಳ್ಳಲು ರಮೇಶ್ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ವಿರಸವೂ ಒಂದು ಪ್ರಮುಖ ಕಾರಣವೆಂದು ಹೇಳಲಾಗುತ್ತಿರುವ ನಡುವೆ ಮುಖ್ಯಮಂತ್ರಿ ಯಡಿಯೂರಪ್ಪನವರ ಜೊತೆಗಿನ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ಈಗ ರಾಜ್ಯ ರಾಜಕಾರಣದ ಕೇಂದ್ರಬಿಂದುವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
