ಬೆಂಗಳೂರು :
ಉಪಚುನಾವಣೆಗೆ ಸ್ಪರ್ಧಿಸಲು ಸುಪ್ರೀಂಕೋರ್ಟ್ನಿಂದ ಗ್ರೀನ್ ಸಿಗ್ನಲ್ ಸಿಕ್ಕ ಬೆನ್ನಲ್ಲೇ ಎಲ್ಲಾ 17 ಅನರ್ಹ ಶಾಸಕರು ಬಿಜೆಪಿ ಸೇರಲು ನಿರ್ಧರಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ದೆಹಲಿ ನಿವಾಸದಲ್ಲಿ ಸಿ.ಪಿ.ಯೋಗೇಶ್ವರ ಜೊತೆ ಸಂತೋಷ್ ಭೇಟಿ ಮಾಡಿದ ಶಾಸಕರು ಪಕ್ಷ ಸೇರುವ ಬಗ್ಗೆ ಅಂತಿಮ ತೀರ್ಮಾನ ಕೈಗೊಂಡಿದ್ದಾರೆ.
ಮಾತುಕತೆ ಬಳಿಕ ಮಾತನಾಡಿದ ರಮೇಶ್ ಜಾರಕಿಹೊಳಿ, ಬಿ.ಸಿ. ಪಾಟೀಲ್ ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಅದರಂತೆ ನಾಳೆ ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಎಲ್ಲಾ 17 ಅನರ್ಹ ಶಾಸಕರು ಬಿಜೆಪಿ ಸದಸ್ಯತ್ವ ಪಡೆಯಲಿದ್ದಾರೆ. “ನಮ್ಮ ರಾಜೀನಾಮೆಯನ್ನು ಸ್ಫೀಕರ್ ಅಂಗೀಕರಿಸಬೇಕಿತ್ತು ಎಂದು ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದೆ. ಸುಪ್ರೀಂಕೋರ್ಟ್ ನಮ್ಮ ಪರವಾಗಿ ನೀಡಿರುವ ತೀರ್ಪನ್ನು ಸ್ವಾಗತಿಸುತ್ತೇನೆ” ಎಂದು ಅವರು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ