ದೆಹಲಿ :
ರಫೇಲ್ ಯುದ್ಧವಿಮಾನ ಖರೀದಿ ಒಪ್ಪಂದಕ್ಕೆ ಸಂಬಂಧಿಸಿ ಕೇಂದ್ರ ಸರಕಾರಕ್ಕೆ ನೀಡಿರುವ ಕ್ಲೀನ್ ಚಿಟ್ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ.
2018ರ ನವೆಂಬರ್ 14 ರಂದು ವಿಚಾರಣೆ ಅಂತ್ಯಗೊಳಿಸಿದ್ದ ಸುಪ್ರೀಂಕೋರ್ಟ್ ಡಿಸೆಂಬರ್ 14ರಂದು ತೀರ್ಪು ಪ್ರಕಟಿಸಿ ಎಲ್ಲ ಅರ್ಜಿಗಳನ್ನು ವಜಾಗೊಳಿಸಿತ್ತು.
ಕೇಂದ್ರದ ಮಾಜಿ ಸಚಿವರಾದ ಯಶ್ವಂತ್ ಸಿನ್ಹಾ, ಅರುಣ್ ಶೌರಿ ಮತ್ತು ವಕೀಲ ಪ್ರಶಾಂತ್ ಭೂಷಣ್ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಗಳ ಸಂಬಂಧ ತೀರ್ಪು ಅನ್ನು ಮುಖ್ಯ.ನ್ಯಾ ರಂಜನ್ ಗೋಗಯ್ ನೇತೃತ್ವದ ನ್ಯಾ. ಎಸ್‍ಕೆ ಕೌಲ್, ನ್ಯಾ. ಕೆಎಂ ಜೋಸೆಫ್ ಅವರಿದ್ದ ತ್ರಿಸದಸ್ಯ ಪೀಠ ಸುದೀರ್ಘ ವಿಚಾರಣೆ ನಡೆಸಿ ತೀರ್ಪನ್ನು ನೀಡಿದೆ.
“ಈ ಪ್ರಕರಣದಲ್ಲಿ ತನಿಖೆ ನಡೆಸಲು ಆದೇಶ ಹೊರಡಿಸುವ ಪೂರಕ ಅಂಶಗಳಿಲ್ಲ. ಹೀಗಾಗಿ ಕೋರ್ಟ್ ಅರ್ಜಿಯನ್ನು ವಜಾ ಮಾಡುತ್ತಿದೇವೆ,” ಎಂದು ಸುಪ್ರೀಂಕೋರ್ಟ್ ಹೇಳಿತು.
ರಫೇಲ್ ಪ್ರಕರಣದಲ್ಲಿ ಕೇಂದ್ರ ಸರ್ಕಾರಕ್ಕೆ ನೀಡಿರುವ ಕ್ಲೀನ್ ಚಿಟ್ ಪ್ರಶ್ನಿಸಿ ಸಲ್ಲಿಕೆಯಾಗಿರುವ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕಕರಿಸಿದೆ. ಈ ಮೂಲಕ ಕೇಂದ್ರ ಸರ್ಕಾರಕ್ಕೆ ಬಿಗ್ ರಿಲೀಫ್ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ