ಅತಿ ಹೆಚ್ಚು ಅಪಘಾತ ನಡೆಯುವ ರಾಜ್ಯಗಳಲ್ಲಿ ನಮ್ಮ ರಾಜ್ಯದ ಸ್ಥಾನ ಯಾವುದು ಗೊತ್ತೆ ?

ಬೆಂಗಳೂರು

    ದೇಶದ ಅತಿ ಹೆಚ್ಚು ಅಪಘಾತ ನಡೆಯುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕವು ನಾಲ್ಕನೇ ಸ್ಥಾನ ಪಡೆದುಕೊಂಡಿದ್ದು ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ 54 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.ರಾಜ್ಯದಲ್ಲಿ 2.2 ಲಕ್ಷ ಅಪಘಾತಗಳು ಸಂಭವಿಸಿ 54 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು ದೇಶದಲ್ಲಿ ನಾಲ್ಕನೇ ಸ್ಥಾನ ಪಡೆದಿವೆ .2017ಕ್ಕೆ ಹೋಲಿಸಿದರೆ 2018ರಲ್ಲಿ ಅಪಘಾತದ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದೆ. 2017ರಲ್ಲಿ 42,542 ಅಪಘಾತಗಳು ವರದಿಯಾಗಿದ್ದರೆ, 2008 ರಲ್ಲಿ 41,707 ಅಪಘಾತಗಳು ಸಂಭವಿಸಿವೆ.

     ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, 2018ರಲ್ಲಿ 10,990 ಮಂದಿ ಬಲಿಯಾದರೆ, 2017ರಲ್ಲಿ 10,609 ಮಂದಿ ಅಸುನೀಗಿದ್ದಾರೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಬಿಡುಗಡೆ ಮಾಡಿರುವ ಅಧ್ಯಯನದ ವರದಿಯಲ್ಲಿ ಇದು ಪತ್ತೆಯಾಗಿದೆ.ತಮಿಳುನಾಡು, ಮಧ್ಯಪ್ರದೇಶ, ಉತ್ತರ ಪ್ರದೇಶ, ಕೇರಳ ರಾಜ್ಯಗಳಲ್ಲಿ ಮೇ, ಜೂನ್ ಹಾಗೂ ಜುಲೈ ತಿಂಗಳಿನಲ್ಲಿ ಹೆಚ್ಚಿನ ಅಪಘಾತ ನಡೆಯುತ್ತಿರುವುದು ವರದಿಯಲ್ಲಿ ಕಂಡು ಬಂದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link