ಶಿಕ್ಷಣ ಇಲಾಖೆ ಅಧಿಕಾರಿ ವಿರುದ್ದ ಕ್ರಮಕ್ಕೆ ಆಗ್ರಹ

ಚಿತ್ರದುರ್ಗ:

    ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‍ಗೆ ಅವಮಾನ ಮಾಡಿರುವ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಹಾಗೂ ಶಿಕ್ಷಣ ಸಚಿವರಾದ ಸುರೇಶ್‍ರವರ ವಿರುದ್ದ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

     ವಿಶ್ವವೇ ಮೆಚ್ಚುವಂತ ಸಂವಿಧಾನವನ್ನು ದೇಶಕ್ಕೆ ನೀಡಿರುವ ಡಾ.ಬಿ.ಆರ್.ಅಂಬೇಡ್ಕರ್ ಸರ್ವರಿಗೂ ಸಮಾನತೆಯನ್ನು ಒದಗಿಸಿದ್ದಾರೆ. ನ.26 ರಂದು ಸಂವಿಧಾನ ದಿನವನ್ನಾಗಿ ಆಚರಿಸುವಂತೆ ಸೂಚಿಸಿರುವ ಉಮಾಶಂಕರ್ ಆದೇಶದ ಪುಟ 5 ಖಂಡಿಕೆ 2 ರಲ್ಲಿ ಸಂವಿಧಾನವನ್ನು ಡಾ.ಬಿ.ಆರ್.ಅಂಬೇಡ್ಕರ್ ಒಬ್ಬರೇ ಬರೆದಿಲ್ಲ ಎಂದು ಅಂಬೇಡ್ಕರ್‍ಗೆ ಅವಮಾನಿಸಿ ಗೊಂದಲ ಸೃಷ್ಟಿಸಿ ತಾನೊಬ್ಬ ಮನುವಾದಿ ಎನ್ನುವುದನ್ನು ಬಹಿರಂಗಪಡಿಸಿದ್ದಾರೆ. ಆದ್ದರಿಂದ ಸುಮೋಟೋ ಕೇಸು ದಾಖಲಿಸಿಕೊಂಡು ದೇಶದಿಂದಲೇ ಗಡಿಪಾರು ಮಾಡಿ ಶಿಕ್ಷಣ ಸಚಿವ ಸುರೇಶ್‍ಕುಮಾರ್ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಪ್ರತಿಭಟನಾನಿರತರು ಒತ್ತಾಯಿಸಿದರು.

       ಉಮಾಶಂಕರ್‍ರವರು ಮುದ್ರಣ ಮಾಡಿರುವಂತ ಪುಸ್ತಕಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದೆಂದು ಎಚ್ಚರಿಸಿದರು.ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಜಿಲ್ಲಾಧ್ಯಕ್ಷ ಕೆ.ರಾಮಚಂದ್ರ, ಕಾರ್ಯಾಧ್ಯಕ್ಷ ಚಂದ್ರಪ್ಪ ಘಾಟ್, ಜಿಲ್ಲಾ ಗೌರವಾಧ್ಯಕ್ಷ ಪಿ.ಎಂ.ತಿಪ್ಪೇಸ್ವಾಮಿ, ಕಾನೂನು ಸಲಹೆಗಾರರಾದ ಜಿ.ಆರ್.ಪ್ರಭಾಕರ್, ವಿ.ಶಿವಕುಮಾರ್, ಲೋಕೇಶ್, ಪರಮೇಶ್, ನಾಗರಾಜ್, ಮಹಮದ್ ಮೊಹಸಿನ್, ಮುಭಾರಕ್ ಪಿಲ್ಟು ಸೇರಿದಂತೆ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link