ಬೆಳಗಾವಿ:
‘ಅಪ್ಪ, ಮಗನನ್ನೇ ಗೆಲ್ಲಿಸೋಕೆ ಆಗದವರು ಬಿಜೆಪಿಯನ್ನ ಹೇಗೆ ಸೋಲಿಸ್ತೀರಾ’ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಅವರು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರ ಕುರಿತು ವ್ಯಂಗ್ಯವಾಡಿದ್ದಾರೆ.
ಅಥಣಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಅನರ್ಹ ಶಾಸಕರನ್ನು ಸೋಲಿಸುವುದೇ ನಮ್ಮ ಗುರಿ ಎಂದು ಓರ್ವ ಮಹಾ ಪುರುಷ ಹೇಳುತ್ತಾರೆ. ಆದರೆ ಅವರ ಅಪ್ಪ ಮತ್ತು ಮಗನನ್ನೇ ಗೆಲ್ಲಿಸಲು ಅವರಿಂದ ಸಾಧ್ಯವಾಗಲಿಲ್ಲ. ಹೀಗಿರುವಾಗ ಅನರ್ಹರನ್ನು ಸೋಲಿಸುತ್ತೇನೆ ಎಂದು ಹೇಳುವ ನಿಮಗೆ ನೊಬೆಲ್ ಪ್ರಶಸ್ತಿ ಕೊಡಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಹರಿಹಾಯ್ದಿದ್ದಾರೆ.
ಇನ್ನು ಸಿದ್ದರಾಮಯ್ಯ ಯಾವುದು ಆಗುತ್ತದೆ ಎನ್ನುತ್ತಾರೋ ಅದು ಆಗುವುದಿಲ್ಲ. ಯಾವುದು ಆಗುವುದಿಲ್ಲ ಎನ್ನುತ್ತಾರೋ ಅದು ಆಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೂಡಾ ವಾಗ್ದಾಳಿ ನಡೆಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ