ಬೆಂಗಳೂರು :
ರಾಜ್ಯ ವಿಧಾನಸಭೆಯ ಉಪಚುನಾವಣೆ ಕಣ ರಂಗೇರಿದ್ದು, ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಮತ್ತೆ ಚುನಾವಣಾ ಪ್ರಚಾರದ ಅಖಾಡಕ್ಕೆ ಇಳಿದಿದ್ದಾರೆ.
ಇಂದಿನಿಂದಲೇ ದೇವೇಗೌಡ ಅವರು ಪ್ರಚಾರ ಆರಂಭಿಸಿದ್ದು, ಇಂದಿನಿಂದ ಐದು ದಿನಗಳ ಕಾಲ ದೇವೇಗೌಡ ಅವರು ಬಿರುಸಿನ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮೊದಲಿಗೆ ಪಕ್ಷಕ್ಕೆ ಕೈಕೊಟ್ಟ ಎಚ್.ವಿಶ್ವನಾಥ್ ಚುನಾವಣೆಗೆ ನಿಂತಿರುವ ಹುಣಸೂರು ಕ್ಷೇತ್ರದಲ್ಲಿ ಪ್ರಚಾರಕ್ಕೆ ತೆರಳಲಿದ್ದಾರೆ. ಇಂದು ಹುಣಸೂರು ಕ್ಷೇತ್ರದಲ್ಲಿ ವಿಶ್ವನಾಥ್ ವಿರುದ್ಧ ಪ್ರಚಾರ ಮಾಡಲಿರುವ ದೇವೇಗೌಡ, ನಾಳೆ ಮಹಾಲಕ್ಷ್ಮಿ ಲೇಔಟ್ ನಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಮತ ಯಾಚನೆ ಮಾಡಲಿದ್ದಾರೆ. ನವೆಂಬರ್ 29 ರಂದು ಕೆ.ಆರ್.ಪೇಟೆ ಜೆಡಿಎಸ್ ಅಭ್ಯರ್ಥಿ ಪರ ಮತ ಯಾಚನೆ ಮಾಡಲಿದ್ದಾರೆ. ಬಳಿಕ ನವೆಂಬರ್ 30 ರಂದು ಚಿಕ್ಕಬಳ್ಳಾಪುರ ಜೆಡಿಎಸ್ ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡಲಿದ್ದಾರೆ. ಡಿಸೆಂಬರ್ 1 ರಂದು ಯಶವಂತಪುರ ಕ್ಷೇತ್ರದಲ್ಲಿ ಮತಯಾಚನೆ ಮಾಡಲಿದ್ದಾರೆ.
ಉಪಚುನಾವಣೆ ಅಖಾಡಕ್ಕೆ ಸ್ವಲ್ಪ ತಡವಾಗಿಯೇ ಎಂಟ್ರಿ ಕೊಟ್ಟಿರುವ ದೇವೇಗೌಡರು, ಜೆಡಿಎಸ್ಗೆ ಹೆಚ್ಚಿನ ಅವಕಾಶ ಇರುವ ಹಳೆ ಮೈಸೂರು ಭಾಗದಲ್ಲಿ ಮಾತ್ರವೇ ಪ್ರಚಾರ ಮಾಡುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ