ಆಸ್ಪತ್ರಗೆ ದಾಖಲಾದ ರಾಜ್ಯಪಾಲ ವಾಜುಭಾಯಿ ವಾಲಾ..!

ಬೆಂಗಳೂರು

     ನಮ್ಮ ರಾಜ್ಯದ ರಾಜ್ಯಪಾಲರಾದ ಶ್ರೀ ವಜುಭಾಯಿ ವಾಲಾ ಅವರು ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ರಾಜ ಭವನ ತಿಳಿಸಿದೆ

     ಸಿಎಂ ಯಡಿಯೂರಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿ ವಾಲಾ ಅವರ ಆರೋಗ್ಯ ವಿಚಾರಿಸಿದರು 80 ವರ್ಷದ ವಜುಭಾಯಿ ವಾಲಾ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ .ರಾಜ್ಯಪಾಲರು ದಾಖಲಾಗಿರುವ ಹಿನ್ನಲೆಯಲ್ಲಿ ಆಸ್ಪತ್ರೆ ಸುತ್ತಮುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದೆ.

    2014ರ ಸೆಪ್ಟೆಂಬರ್ 1ರಂದು ವಜುಭಾಯಿ ವಾಲಾ ಕರ್ನಾಟಕದ ರಾಜ್ಯಪಾಲರಾಗಿ ಅಧಿಕಾರ ಸ್ವೀಕಾರ ಮಾಡಿದ್ದರು. ಅವರ ಅವಧಿ ಮಾರ್ಚ್‌ಗೆ ಮುಕ್ತಾಯಗೊಂಡಿದೆ. ಇನ್ನೂ ಹೊಸ ರಾಜ್ಯಪಾಲರನ್ನು ನೇಮಕವಾಗದ ಹಿನ್ನೆಲೆಯಲ್ಲಿ ಅವರೆ ಮುಂದುವರಿದಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap