ಡಾ. ಬಿ.ಆರ್. ಅಂಬೇಡ್ಕರ್ ಅವರ ಆದರ್ಶಗಳನ್ನು ಪಾಲಿಸಿ : ಡಾ: ಲಕ್ಷ್ಮಣ್‍ದಾಸ್

ತುಮಕೂರು

   ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ವಿದ್ಯಾರ್ಥಿಗಳು ಓದಿ ತಿಳಿದುಕೊಂಡು ಅವರ ಆದರ್ಶಗಳನ್ನು ಪಾಲಿಸಿ ದೇಶದ ಸತ್ಪ್ರಜೆಗಳಾಗಿ ಅವರ ತತ್ವ-ಸಿದ್ದಾಂತಗಳು ನಿಮ್ಮ ಬದುಕಿಗೆ ದಾರಿದೀಪವಾಗಲಿ ಎಂದು ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕøತ ಡಾ. ಲಕ್ಷ್ಮಣದಾಸ್ ಅವರು ಕರೆ ನೀಡಿದರು.

    ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ದವನ ಭೂಮಿಕೆ ಸಾಂಸ್ಕøತಿಕ ಟ್ರಸ್ಟ್ ಮತ್ತು ಅರುಣೋದಯ ಶೈಕ್ಷಣಿಕ ಮತ್ತು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಸಂಯುಕ್ತವಾಗಿ ನಗರದ ಡಾ. ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿಂದು ಹಮ್ಮಿಕೊಂಡಿದ್ದ ಅಂಬೇಡ್ಕರ್ ಓದು ಯುವ ಚೈತನ್ಯ ಚಿಂತನೆಯ ಜ್ಞಾನೋತ್ಸವ ಶೈಕ್ಷಣಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

   ಕಾರ್ಯಕ್ರಮದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಪ್ರೊ. ಟಿ.ಎ. ಲಲಿತಾ ಕುಮಾರಿ ಮಾತನಾಡಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕುಟುಂಬ, ಬಾಲ್ಯದ ದಿನಗಳು, ಅವರ ವಿದ್ಯಾಭ್ಯಾಸದ ಕುರಿತು ಸ್ಮರಿಸುತ್ತಾ, ಸಾಮಾಜಿಕ ಮತ್ತು ಹೆಣ್ಣುಮಕ್ಕಳ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿ ಸಾಮಾಜಿಕ ಕ್ರಾಂತಿಯನ್ನೇ ಸೃಷ್ಠಿಸಿದ್ದಾರೆ. ಡಾ. ಬಿ.ಆರ್. ಅಂಬೇಡ್ಕರ್ ಅವರು ಭಾರತ ದೇಶಕ್ಕೆ ಅಪಾರ ಕೊಡುಗೆ ನೀಡಿರುವ ಅನಘ್ರ್ಯರತ್ನ ಎಂದರು.

    ಕವಿಗಳು ಹಾಗೂ ಕನ್ನಡ ಪ್ರಾಧ್ಯಾಪಕರಾದ ಡಾ. ಓ ನಾಗರಾಜು ಅವರು ತಮ್ಮ ಆಶಯ ಭಾಷಣದಲ್ಲಿ ಅಂಬೇಡ್ಕರ್ ಓದು ಯುವಕರಿಗೆ ತಲುಪಬೇಕಾದ ಸಂದೇಶ. ಓದುವ ಪ್ರಕ್ರಿಯೆ ನಮ್ಮನ್ನು ಆವರಿಸಿಕೊಳ್ಳದ ಹೊರತು ಸಮಾಜವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಪ್ರಸ್ತುತ ಸಂವಿಧಾನದ ಆಚೆಗೆ ಡಾ. ಬಿ.ಆರ್. ಅಂಬೇಡ್ಕರ್ ಇದ್ದಾರೆ ಅದನ್ನು ನಾವೆಲ್ಲರೂ ಓದಿ ತಿಳಿಯಬೇಕಿದೆ. ಸಂವಿಧಾನ ಕೇವಲ ಮೀಸಲಾತಿಯಲ್ಲ ಅದೊಂದು ಆಡಳಿತಾತ್ಮಕ ದಾಖಲೆ. ಅಂಬೇಡ್ಕರ್ ಓದು ಎಂಬ ಇಂದಿನ ಈ ಕಾರ್ಯಕ್ರಮ ಯಶಸ್ವಿಯಾಗಬೇಕಾದರೆ ವಿದ್ಯಾರ್ಥಿಗಳಲ್ಲಿರುವ ಉತ್ಸಾಹ ವಿವೇಕವಾಗಿ ಪರಿವರ್ತನೆಯಾಗಬೇಕು ಎಂದರು.

      ಅಂಬೇಡ್ಕರ ಓದು ಶೈಕ್ಷಣಿಕ ಕಾರ್ಯಕ್ರಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್‍ರವರನ್ನು ಓದುವುದು ಹೇಗೆ, ಸುಸ್ಥಿರ ಭಾರತದ ಅಭಿವೃದ್ಧಿಗೆ ಡಾ. ಬಿ.ಆರ್. ಅಂಬೇಡ್ಕರ್ ರವರ ಕೊಡುಗೆಗಳು, ಲಿಂಗ ಸಮಾನ ಅವಕಾಶಗಳು: ಅಂಬೇಡ್ಕರ್ ರವರ ದೃಷ್ಟಿಕೋನದಲ್ಲಿ ಎಂಬ ವಿಷಯಗಳ ಮೂರು ಗೋಷ್ಠಿಗಳನ್ನು ಆಯೋಜಿಸಲಾಗಿತ್ತು.

     ಗೋಷ್ಠಿಯಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಕವಿಗಳು ಹಾಗೂ ವಿಮರ್ಶಕ ಡಾ. ರವಿಕುಮಾರ್ ನೀಹ, ಮೈಸೂರು ವಿಶ್ವವಿದ್ಯಾನಿಲಯದ ಅಂಬೇಡ್ಕರ್ ಅಧ್ಯಯನ ಮತ್ತು ವಿಸ್ತರಣಾ ಕೇಂದ್ರದ ಸಂಯೋಜಕ ಡಾ. ಎಸ್. ನರೇಂದ್ರಕುಮಾರ್, ತುಮಕೂರು ವಿಶ್ವವಿದ್ಯಾನಿಲಯದ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ.ಜಿ. ಬಸವರಾಜು, ಚಿಕ್ಕನಾಯಕನಹಳ್ಳಿ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಎಂ.ಎಸ್. ರವಿಕುಮಾರ್ ಕಟ್ಟೇಮನೆ, ಕಲಾವಿದ ಮಲ್ಲಿಕಾರ್ಜುನ ಕೆಂಕೆರೆ, ವಿಮರ್ಶಕ ಜಿ.ವಿ. ಆನಂದಮೂರ್ತಿ, ಗುಬ್ಬಿವೀರಣ್ಣ ಟ್ರಸ್ಟ್ ಸದಸ್ಯ ಸತೀಶ್ ಕಾಡಶೆಟ್ಟಿಹಳ್ಳಿ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಯರಾಮ್ ಅವರು ಗೋಷ್ಠಿಗಳಲ್ಲಿ ತಮ್ಮ ವಿಚಾರಗಳನ್ನು ಮಂಡಿಸಿದರು.

      ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜಪ್ಪ ಆಪಿನಕಟ್ಟೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಮಂಜುನಾಥ ಡಿ., ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಗೋವಿಂದಯ್ಯ, ಜಿಲ್ಲೆಯ ವಿವಿಧ ಪದವಿ ಪೂರ್ವ ಕಾಲೇಜು ಮತ್ತು ಬಿಇಡಿ ಕಾಲೇಜುಗಳ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap