ಬೆಂಗಳೂರು :
ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಸ್ಫೋಟಕಗಳ ಪರಿಶೀಲನೆ ವೇಳೆ ದುರಂತ ನಡೆದಿದ್ದು, ಐವರು ವಿಜ್ಞಾನಿಗಳು ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ.
ಮಡಿವಾಳದಲ್ಲಿರುವ ಎಫ್.ಎಸ್.ಎಲ್ ನಲ್ಲಿ ಇಂದು ವಿಜ್ಞಾನಿಗಳು ಡೆಟೋನೇಟರ್ ಗಳ ಪರಿಶೀಲನಾ ಕಾರ್ಯ ನಡೆಸುತ್ತಿದ್ದರು. ಈ ವೇಳೆ 9 ಡೆಟೋನೇಟರ್ ಗಳ ಪೈಕಿ ಒಂದು ಸ್ಪೋಟಗೊಂಡಿದೆ. ಸ್ಫೋಟದ ರಭಸಕ್ಕೆ ಲ್ಯಾಬ್ನಲ್ಲಿ ಕೆಲಸ ಮಾಡುತ್ತಿದ್ದ ಐವರು ವಿಜ್ಞಾನಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ದುರ್ಘಟನೆಯಿಂದಾಗಿ ಕೆಲಹೊತ್ತು ಆತಂಕ ಮನೆಮಾಡಿತ್ತು.
ಇನ್ನು ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಆಗ್ನೇಯ ವಿಭಾಗದ ಡಿಸಿಪಿ ಇಶಾ ಪಂತ್, ಎಸಿಪಿ ಕರಿಬಸನಗೌಡ ಸೇರಿದಂತೆ ಹಿರಿಯ ಅಧಿಕಾರಿಗಳು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ