ಬೆಂಗಳೂರು:
ವಿಧಾನಸಭೆ 15 ಕ್ಷೇತ್ರಗಳ ಉಪಚುನಾವಣೆಗೆ ಡಿ.5ರಂದು ಮತದಾನ ನಡೆಯುತ್ತಿರುವುದರಿಂದ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.
ಅಥಣಿ, ಕಾಗವಾಡ, ಗೋಕಾಕ, ಯಲ್ಲಾಪುರ, ಹಿರೇಕೆರೂರು, ರಾಣೆಬೆನ್ನೂರು, ವಿಜಯನಗರ, ಚಿಕ್ಕಬಳ್ಳಾಪುರ, ಕೆ.ಆರ್.ಪುರ, ಯಶವಂತಪುರ, ಮಹಾಲಕ್ಷ್ಮಿ ಲೇಔಟ್, ಶಿವಾಜಿನಗರ, ಕೃಷ್ಣರಾಜಪೇಟೆ ಹಾಗೂ ಹುಣಸೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ.
ತುರ್ತು ಸೇವೆಗಳಿಗೆ ಈ ರಜೆಯು ಅನ್ವಯಿಸುವುದಿಲ್ಲ. ಆದರೆ ತುರ್ತು ಸೇವೆಯಡಿ ಕಾರ್ಯನಿರ್ವಹಿಸುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ.
ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿನ ಸರ್ಕಾರಿ ಕಚೇರಿ, ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಹಾಗೂ ಉಪಚುನಾವಣೆ ನಡೆಯುವ ಕ್ಷೇತ್ರಗಳ ಹೊರಗಡೆ ಕೆಲಸ ನಿರ್ವಹಿಸುತ್ತಿರುವ ನೋಂದಾಯಿತ ಮತದಾರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಡಿ.5 ರಂದು ವೇತನ ಸಹಿತ ರಜೆಯನ್ನು ಘೋಷಿಸಿ ಆದೇಶಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ