ಬೆಂಗಳೂರು :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ(ಬಿಬಿಎಂಪಿ) 12 ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆಗೆ ಇಂದು ನಡೆಯಬೇಕಿದ್ದ ಚುನಾವಣೆ ಮುಂದೂಡಲಾಗಿದೆ.
ಇಂದು ಟೌನ್ ಹಾಲ್ ನಲ್ಲಿ ಚುನಾವಣೆ ನಡೆಯಲಿದ್ದು, ಬೆಳಗ್ಗೆ 8 ರಿಂದ 9.30 ರ ವರೆಗೆ ನಾಮಪತ್ರ ಸ್ವೀಕಾರ ಕಾರ್ಯಕ್ರಮ ನಡೆಯಬೇಕಿತ್ತು. ಆದರೆ ನಾಮಪತ್ರ ಸಲ್ಲಿಕೆ ಆಗದ ಹಿನ್ನೆಲೆಯಲ್ಲಿ ಚುನಾವಣೆ ಮುಂದೂಡಲಾಗಿದೆ.
ಸ್ಥಾಯಿ ಸಮಿತಿಗಳ ಅವಧಿ ಡಿಸೆಂಬರ್ 5ಕ್ಕೆ ಮುಕ್ತಾಯವಾಗಲಿದೆ. ಹಿನ್ನೆಲೆಯಲ್ಲಿ ಪ್ರಾದೇಶಿಕ ಆಯುಕ್ತ ಹರ್ಷಗುಪ್ತ ಡಿಸೆಂಬರ್ 4ರಂದು ಚುನಾವಣೆ ನಡೆಸಲು ಸಿದ್ಧತೆ ಅಭ್ಯರ್ಥಿಗಳ ಆಯ್ಕೆ ನಡೆಸಿದೆ. ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ಚುನಾವಣೆ ಹಾಜರಾಗದಿರಲು ತೀರ್ಮಾನಿಸಿದ್ದು, ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಚುನಾವಣೆ ಮುಂದೂಡಲಾಗಿದೆ.
ಹಿಂದೆಯೇ ಚುನಾವಣೆ ಮುಂದೂಡುವಂತೆ ಪ್ರಾದೇಶಿಕ ಆಯುಕ್ತರಿಗೆ ಮೂರು ಪಕ್ಷಗಳ ನಾಯಕರು ಮನವಿ ಮಾಡಿದ್ದರು. ಆದರೆ ಪ್ರಾದೇಶಿಕ ಆಯುಕ್ತರು ಮನವಿಯನ್ನು ತಿರಸ್ಕರಿಸಿ ಚುನಾವಣೆ ನಡೆಸಲು ಮುಂದಾಗಿದ್ದರು.
ಮೇಯರ್ ಆಯ್ಕೆ ಸಂದರ್ಭದಲ್ಲೇ ಬಿಬಿಎಂಪಿಯ ಸ್ಥಾಯಿ ಸಮಿತಿ ಸದಸ್ಯರ ಆಯ್ಕೆಗೆ ನಡೆಸಬೇಕಾಗಿದ್ದ ಚುನಾವಣೆ ಗೊಂದಲದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿತ್ತು. ಅಲ್ಲದೇ ಒಂಬತ್ತು ಸ್ಥಾಯಿ ಸಮಿತಿಗಳ ಚುನಾವಣೆಗೆ ಕೋರ್ಟ್ ತಡೆ ನೀಡಿ, ಅವಧಿ ಪೂರ್ಣಗೊಳ್ಳುವವರೆಗೂ ಚುನಾವಣೆ ನಡೆಸದಂತೆ ತಿಳಿಸಿತ್ತು. ಇದೀಗ ಮತ್ತೆ ಚುನಾವಣೆಯನ್ನು ಮುಂದೂಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ