ಆಸ್ಪತ್ರೆಗಳಲ್ಲಿ ಗುಣಮಟ್ಟದ ಸೇವೆ ನೀಡಿ; ಡಾ.ಪಾಲಾಕ್ಷ

ಚಿತ್ರದುರ್ಗ

     ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ವಚ್ಛತೆಯನ್ನು ಕಾಯ್ದುಕೊಳ್ಳುವ ಜೊತೆಗೆ ಸಾರ್ವಜನಿಕರಿಗೆ ಗುಣಮಟ್ಟದ ಸೇವೆ ನೀಡುವುದಕ್ಕೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಿ.ಎಲ್. ಪಾಲಾಕ್ಷ ಹೇಳಿದರು.

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಚಿತ್ರದುರ್ಗ, ಜಿಲ್ಲಾ ಆಸ್ಪತ್ರೆ , ಜಿಲ್ಲಾ ಗುಣಮಟ್ಟ ಸೇವಾ ಭರವಸೆ ಘಟಕ ಚಿತ್ರದುರ್ಗ ರವರ ಸಹಯೋಗದೊಂದಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳವರ ಸಭಾಂಗಣದಲ್ಲಿ ಗುಣಮಟ್ಟ ಸೇವಾ ಭರವಸೆ ಕುರಿತು ಪ್ರಾಥಮಿಕ ಆರೋಗ್ಯ ಕೇಂದ್ರ, ಸಮೂದಾಯ ಆರೋಗ್ಯ ಕೇಂದ್ರ ಮತ್ತು ಸಾರ್ವಜನಿಕ ಆಸ್ಪತ್ರೆಗಳ ಸೇವಾ ನಿರ್ವಾಕರಿಗೆ ಏರ್ಪಡಿಸಲಾದ ತರಬೇತಿ ಕಾರ್ಯಾಗಾರ ಉಧ್ಘಾಟಿಸಿ ಅವರು ಮಾತನಾಡಿದರು.

     ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಸಾರ್ವಜನಿಕ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಗುಣಮಟ್ಟದ ಸೇವೆ ಸಿಗುವಂತಾಗಬೇಕು. ಗುಣಮಟ್ಟದ ಸೇವ ಭರವಸೆಯನ್ನು ಹೇಗೆ ಈಡೇರಿಸಬೇಕು ಎನ್ನುವುದನ್ನು ಇಂತಹ ತರಬೇತಿ ಕಾರ್ಯಾಗಾರದಲ್ಲಿ ಅರಿತು, ಸಾಮರ್ಥ್ಯ ಬಲವರ್ಧನೆ ಮಾಡೊಕೊಳ್ಳಬೇಕು. ಆಸ್ಪತ್ರೆಗೆ ಆಗಮಿಸುವ ನಾಗರೀಕರಿಗೆ ಗುಣಮಟ್ಟದ ಸೇವಾ ಭರವಸೆಯನ್ನು ನೀಡಿ, ಖಾಸಗಿ ಆಸ್ಪತ್ರೆಯಲ್ಲಿ ಸಿಗುವಂತೆ ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಉತ್ತಮ ಸ್ವಚ್ಛ ಸೇವೆ ಸಿಗುವಂತಾಗಲಿ ಎಂದರು.

      ಜಿಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಸಿ.ಒ.ಸುಧಾ ಪ್ರಾಸ್ತಾವಿಕವಾಗಿ ಮಾತನಾಡಿ, ಗುಣಮಟ್ಟದ ಸೇವಾ ಭರವಸೆಯನ್ನು ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮದ ಜೊತೆಯಲ್ಲಿ ಪ್ರಾರಂಭಿಸಲಾಗಿದೆ, ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಸಾರ್ವಜನಿಕ ಆಸ್ಪತ್ರೆಯಲ್ಲಿ ಈಗಾಗಲೇ ಕಾಯಕಲ್ಪ ಯೋಜನೆ ಅಡಿಯಲ್ಲಿ ಆರೋಗ್ಯ ಸಂಸ್ಥೆಗಳ ಆಂತರಿಕ ಮತ್ತು ಬಾಹ್ಯಾ ಸ್ವಚ್ಛತೆಯನ್ನು ಬಲಪಡಿಸುವ ಮೂಲಕ ಗುಣಮಟ್ಟದ ಸೇವಾ ಭರವಸೆಯನ್ನು ನೀಡಲಾಗುತ್ತಿದೆ.

      ಕಾಯಕಲ್ಪ ಯೋಜನೆಯಲ್ಲಿ ಜಿಲ್ಲೆಯ ಒಟ್ಟು 28 ಆರೋಗ್ಯ ಸಂಸ್ಥೆಗಳಿಗೆ ರಾಜ್ಯ ಮಟ್ಟದ ಪ್ರಶಸ್ತಿ ಲಭಿಸಿದೆ ಇವುಗಳಲ್ಲಿ 20 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 5 ಸಮುದಾಯ ಆರೋಗ್ಯ ಕೇಂದ್ರಗಳು, 2 ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆ ಚಿತ್ರದುರ್ಗ ಪ್ರಶಸ್ತಿ ಗಳಿಸಿವೆ. ಕೊಂಡ್ಳಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ರಾಜ್ಯ ಮಟ್ಟದಲ್ಲಿ ಪ್ರಥಮ ಪ್ರಶಸ್ತಿಗೆ ಭಾಜನವಾಗಿರುವುದು ಹೆಮ್ಮೆಯ ವಿಷಯ. ಇದೇ ರೀತಿ ಜಿಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹೆಚ್ಚಿನ ಗುಣಮಟ್ಟದ ಸೇವೆ ಭರವಸೆಯನ್ನು ಸಾರ್ವಜನಿಕರಿಗೆ ಒದಗಿಸುವ ನಿರೀಕ್ಷೆಯಿದೆ. ಜಿಲ್ಲಾ ಆಸ್ಪತ್ರೆ ಚಿತ್ರದುರ್ಗ, ಜಾಜೂರು, ಕೊಂಡ್ಳಹಳ್ಳಿ, ಬೆಲಗೂರು ಸಮುದಾಯ ಆರೋಗ್ಯ ಕೇಂದ್ರಗಳು ಈ ಬಾರಿ   ಸರ್ಟಿಫಿಕೇಷನ್ ಪಡೆಯಲು ಸಿದ್ದವಾಗಿವೆ ಎಂಬ ವಿಷಯ ಸಂತಸ ತಂದಿದೆ ಎಂದರು.

      ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ಜನ್ ಡಾ.ಬಸವರಾಜ್, ಡಾ.ರೇಣುಪ್ರಸಾದ್, ಡಾ.ಆನಂದ್ ಪ್ರಕಾಶ್, ಡಾ.ರೇಖ, ಸ್ಪೂರ್ತಿ ಜಿಲ್ಲಾ ಗುಣಮಟ್ಟ ಸೇವಾ ಭರವಸೆ ಘಟಕದ ವ್ಯವಸ್ಥಾಪಕರು, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ, ಭವ್ಯ ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap