ಕೂಡ್ಲಿಗಿ:
ತಾಲ್ಲೂಕಿನ ಅಮಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಶನಿವಾರ ಎರಡು ಲಾರಿಗಳು ಮುಖಾ ಮುಖಿ ಡಿಕ್ಕಿಯಾಗಿ ಇಬ್ಬರು ಗಾಯಗೊಂಡ್ಡು, ಮತ್ತಿಬ್ಬರು ಮೃತಪಟ್ಟಿದ್ದಾರೆ. ಒಬ್ಬ ಮೃತರನ್ನು ಗಣೇಶ್(35) ಎಂದು ಗುರುತಿಸಲಾಗಿದ್ದು, ಮತ್ತೊಬ್ಬ ಮೃತನ ಹೆಸರು ತಿಳಿದು ಬಂದಿಲ್ಲ.
ಕೂಡ್ಲಿಗಿ ಕಡೆಯಿಂದ ಚಿತ್ರದುರ್ಗದ ಕಡೆಗೆ ಹೋಗುತ್ತಿದ್ದ ಲಾರಿಯ ಚಾಲಕ, ಮುಂದೆ ಹೋಗುತ್ತಿದ್ದ ಲಾರಿಯನ್ನು ಹಿಂದಿಕ್ಕುವ ಭರದಲ್ಲಿ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿಹೊಡೆದಿದ್ದಾನೆ. ಇದರಿಂದ ಚಿತ್ರದುರ್ಗದ ಕಡೆ ಹೋಗುತ್ತಿದ್ದ ಲಾರಿಯ ಚಾಲಕ ಗಣೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಅದೇ ಲಾರಿಯಲ್ಲಿದ್ದ ಮತ್ತೊಬ್ಬ ಕೂಡ್ಲಿಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಎದುರಿನಲ್ಲಿ ಬಂದ ಲಾರಿಯಲ್ಲಿದ್ದ ಅಜೇಯ ಹಾಗೂ ಇಮಾಮ್ ಸಾಬ್ ಗಾಯಗೊಂಡಿದ್ದು, ಬಳ್ಳಾರಿ ವಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಪಿಎಸ್ಐ ನಾಗರಾಜ ಸ್ಥಳಕ್ಕೆ ಭೇಟಿ ನೀಡಿದ್ದು, ಕಾನಹೊಸಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








