ನವದೆಹಲಿ:
ರಾಣಿ ಝಾನ್ಸಿ ನಗರದ ರಸ್ತೆಯ ಅನಜ್ ಮಂಡಿಯಲ್ಲಿರುವ ಮೂರು ಮಹಡಿಯ ಕಟ್ಟಡದಲ್ಲಿ ಬೆಂಕಿ ಬಿದ್ದು ಭಾರೀ ಅನಾಹುತ ಸಂಭವಿಸಿದ್ದು, ಸಾವಿನ ಸಂಖ್ಯೆ 35ಕ್ಕೆ ಏರಿಕೆಯಾಗಿದೆ.
ಇಂದು ಬೆಳ್ಳಂಬೆಳಗ್ಗೆ ಘಟನೆ ನಡೆದಿದ್ದು, ಬೆಂಕಿಯ ಕೆನ್ನಾಲಿಗೆಯಿಂದ 50ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದೆ. ಈ ನಡುವೆಯೂ ಕಟ್ಟಡದಲ್ಲಿ ಹೊಗೆ ತುಂಬಿಕೊಂಡು 35 ಜನ ಸಾವನ್ನಪ್ಪಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಮೂರು ಮಹಡಿಯ ಕಟ್ಟಡಕ್ಕೆ ಬಿಂಕಿ ಹೊತ್ತಿಕೊಂಡ ತಕ್ಷಣ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ.ಘಟನೆಗೆ ನಿಖರ ಕಾರಣ ಏನು ಎಂದು ತಿಳಿದು ಬಂದಿಲ್ಲ.
#UPDATE– Delhi Police: 35 people dead in fire incident at Anaj Mandi, Rani Jhansi Road https://t.co/DWmD55nnq4
— ANI (@ANI) December 8, 2019
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
