ದತ್ತ ಜಯಂತಿ ಅಂಗವಾಗಿ ಭದ್ರತೆಗಾಗಿ 5000ಕ್ಕೂ ಅಧಿಕ ಪೊಲೀಸರ ನೇಮಕ..!

ಚಿಕ್ಕಮಗಳೂರು :

     ಡಿಸೆಂಬರ್ 10 ರಿಂದ 12 ರ ವರೆಗೆ ನಡೆಯಲಿರುವ ದತ್ತ ಜಯಂತಿಯನ್ನು ಶಾಂತಿಯುತವಾಗಿ ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು, 5 ಸಾವಿರಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನು ಬಂದೋಬಸ್ತ್ ಗೆ ನೇಮಿಸಲಾಗಿದೆ.

     ಈ ಕುರಿತು ಮಾಹಿತಿ ನೀಡಿರುವ ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಭಕ್ತರಿಗೆ ಕುಡಿಯುವ ನೀರು, ನೆರಳು, ವೈದ್ಯಕೀಯ ಶೌಚಾಲಯ, ಪ್ರಸಾದ ವ್ಯವಸ್ಥೆ ಹಾಗೂ ರಸ್ತೆ ದುರಸ್ತಿ ಮಾಡಲಾಗಿದೆ. ಡಿಸೆಂಬರ್ 12 ರಂದು ನಡೆಯುವ ದತ್ತ ಜಯಂತಿಯನ್ನು ಜಿಲ್ಲಾಡಳಿತವೇ ಆಯೋಜಿಸಿದೆ ಎಂದು ತಿಳಿಸಿದರು.ಡಿಸೆಂಬರ್ 12 ರಂದು ಬೆಳಗ್ಗೆ 7 ರಿಂದ ಸಂಜೆ 5 ರ ವರೆಗೆ ದತ್ತ ಪಾದುಕೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದ್ದು, ಗುಹೆ ಒಳಭಾಗದಲ್ಲಿ ಕ್ಯಾಮೆರಾ, ವಿಡಿಯೋ, ಮೊಬೈಲ್ ಬಳಕೆ ನಿಷೇಧಿಸಲಾಗಿದೆ ಎಂದು ತಿಳಿಸಿದರು.

    ಮುಂದಿನ ಮೂರುವರೆ ವರ್ಷ ಸ್ಥಿರ ಸರಕಾರ ನೀಡಿ ರಾಜ್ಯವನ್ನು ಸಮೃದ್ಧಿಯಡೆಗೆ ಕೊಂಡೊಯ್ಯುವುದು ನಮ್ಮ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.ಅವರು ಭಾನುವಾರ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸುಮಾರು 347 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಉಜಿರೆ ಎಸ್.ಡಿ.ಎಂ. ಕ್ರೀಡಾಂಗಣದಲ್ಲಿ ಮಾತನಾಡಿದರು.

     ರಾಜ್ಯವನ್ನು ಮಾದರಿಯನ್ನಾಗಿ ಮಾಡುವುದು ನನ್ನ ಇಚ್ಚೆ. ಈ ನಿಟ್ಟಿನಲ್ಲಿ ಸರ್ವರ ಸಹಕಾರದೊಂದಿಗೆ ಮುಂದಿನ ದಿನಗಳಲ್ಲಿ ಪ್ರಗತಿಯನ್ನು ತೀವ್ರಗೊಳಿಸಿ ಜನತೆಯಲ್ಲಿ ನೆಮ್ಮದಿ ಮೂಡಿಸುವುದು ಸರಕಾರದ ಧ್ಯೇಯವಾಗಿದೆ ಎಂದು ಬಿ.ಎಸ್. ಯಡಿಯೂರಪ್ಪ ತಿಳಿಸಿದರು.ರಾಜ್ಯ ದಲ್ಲಿ ಇತ್ತೀಚೆಗೆ ನಡೆದ ಅತಿವೃಷ್ಟಿ ಸಂದರ್ಭದಲ್ಲಿ ಜನತೆ ಸರಕಾರಕ್ಕೆ ಬಹಳ ನೆರವು ನೀಡಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳವು ಅತಿವೃಷ್ಟಿ ಸಂದರ್ಭದಲ್ಲಿ ಸುಮಾರು 25 ಕೋಟಿ ರೂಪಾಯಿ ನೆರವು ನೀಡಿದ್ದು, ಸರಕಾರ ಇದಕ್ಕೆ ಕೃತಜ್ಞಾಪೂರ್ವಕವಾಗಿದೆ ಎಂದ ಮುಖ್ಯಮಂತ್ರಿಗಳು, ನೆರೆ ಸಂತ್ರಸ್ತರಿಗೆ ರಾಜ್ಯ ಸರಕಾರ ಎಲ್ಲ ನೆರವು ನೀಡುತ್ತಾ ಬಂದಿದೆ ಎಂದು ಯಡಿಯೂರಪ್ಪ ಹೇಳಿದರು.

      ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಒಡಿಯೂರು ಎಂಬಲ್ಲಿ ಶನಿವಾರ ಗುಡ್ಡ ಕುಸಿದು ಸಾವನ್ನಪ್ಪಿದವರಿಗೆ ತಲಾ ಮೂರು ಲಕ್ಷ ರೂ.ಪರಿಹಾರ ಮಂಜೂರು ಮಾಡಲಾಗುವುದು. ಬೆಳ್ತಂಗಡಿ ತಾಲೂಕಿನ ಕಣಿಯೂರು ನಲ್ಲಿ ಹೋಬಳಿ ಕೇಂದ್ರ ಸ್ಥಾಪಿಸಲಾಗುವುದು. ಧರ್ಮಸ್ಥಳದ ನೇತ್ರಾವತಿ ನದಿಯಲ್ಲಿ ಕಿಂಡಿ ಅಣೆಕಟ್ಟು ನಿರ್ಮಿಸಲು ಅನುಮೋದನೆ ನೀಡಲಾಗಿದ್ದು, ಶೀಘ್ರದಲ್ಲೇ ಅನುದಾನ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿಗಳು ಪ್ರಕಟಿಸಿದರು.

      ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅಧ್ಯಕ್ಷತೆ ವಹಿಸಿದ್ದರು. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ, ಶಾಸಕರಾದ ಸಂಜೀವ ಮಟಂದೂರು, ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ರಾಜೇಶ್ ನಾಯಕ್ ಮತ್ತಿತರರು ಇದ್ದರು.ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸ್ವಾಗತಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link