ಬೆಂಗಳೂರು :
ಮಾಜಿ ಸಿಎಂ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಕಂದಾಯ ಸಚಿವ ಆರ್. ಅಶೋಕ್ ಆಗ್ರಹಿಸಿದ್ದಾರೆ.
ಉಪಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದು, ಬಿಜೆಪಿಗೆ 12 ಸೀಟುಗಳು ಲಭಿಸಿವೆ. ಸಿದ್ದರಾಮಯ್ಯ ಅವರಿಗೆ ನೈತಿಕತೆ ಇಲ್ಲ.ಹೀಗಾಗಿ ಅವರು ಕೂಡಲೇ ರಾಜೀನಾಮೆ ಕೊಡಬೇಕು. ಮುಂದಿನ ದಿನಗಳಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ವಿಪಕ್ಷ ಸ್ಥಾನದಿಂದ ಕೆಳಗಿಳಿಸುವ ದೊಡ್ಡ ಪರ್ವವೇ ಆರಂಭವಾಗುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ಸಿಗೆ 2 ಸೀಟು ಎಂದು ಹೇಳಲಾಗುತ್ತಿದೆ. ಜೆಡಿಎಸ್ ಕರ್ನಾಟಕದ ಭೂಪಟದಲ್ಲಿ ಕಾಣೆಯಾಗುತ್ತಿದೆ ಎಂದೂ ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
