ಕರ್ನಾಟಕ ಸರ್ಕಾಸದ ಇ- ಆಡಳಿತ ಸಲಹೆಗಾರರ ಕಚೇರಿಗೆ ಬೆಂಕಿ..!

ಬೆಂಗಳೂರು

    ನಗರದ ಎಂಎಸ್ ಬಿಲ್ಡಿಂಗ್‌ನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಇ- ಆಡಳಿತ ಸಲಹೆಗಾರ ಬೇಳೂರು ಸುದರ್ಶನ್ ಅವರ ಕೊಠಡಿಯಲ್ಲಿ ಮಂಗಳವಾರ ಬೆಳಿಗ್ಗೆ ಅಕಸ್ಮಿಕ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕ ಸೃಷ್ಠಿಯಾಗಿತ್ತು.ಬೆಂಕಿಯಿಂದ ವಿದ್ಯುತ್ ಉಪಕರಣಗಳು ಸುಟ್ಟುಹೋಗಿವೆ ಬೇಳೂರು ಸುದರ್ಶನ್ ಅವರ ಕೊಠಡಿಯ ಸ್ವಿಚ್ ಬಾಕ್ಸ್‌ನಲ್ಲಿ ಬೆಂಕಿ ಹೊತ್ತಿಕೊಂಡು ದಟ್ಟ ಹೊಗೆ ಹೊರಬರುತ್ತಿರುವುದನ್ನು ಗಮನಿಸಿದ ಸಿಬ್ಬಂದಿ ಕೂಡಲೇ ಆಗ್ನಿಶಾಮಕ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

    ತಕ್ಷಣವೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದು ಹೆಚ್ಚಿನ ಅನಾಹುತ ಸಂಭವಿಸಿಲ್ಲ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಅಂಭವಿಸಿದೆ ನವೆಂಬರ್ 6ರಂದು ಶಾರ್ಟ್ ಸರ್ಕ್ಯೂಟ್‌ನಿಂದ ವಿಧಾನಸೌಧದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ವಿಧಾನಸೌದ ಎರಡನೇ ಮಹಡಿಯಲ್ಲಿರುವ ಆರ್ಥಿಕ ಇಲಾಖೆ ವಿಶೇಷ ಕಾರ್ಯದರ್ಶಿ ಪದ್ಮಾವತಿ ಅವರ ಕಚೇರಿಯ ಎರಡು ಎ.ಸಿಗಳ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಕಾಣಿಸಿಕೊಂಡಿತು. ಇದರಿಂದ ಕೆಲಕಾಲ ವಿಧಾನಸೌಧ ಸಿಬ್ಬಂದಿ ಆತಂಕ ಮನೆ ಮಾಡಿತ್ತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link