ಮುಂಬೈ:
This Bill is against the religious pluralism of India. I request all justice loving people to oppose the bill in a democratic manner. It runs against the very basic feature of the Constitution. @ndtvindia@IndianExpress #CitizenshipAmendmentBill2019 pic.twitter.com/1ljyxp585B
— Abdur Rahman (@AbdurRahman_IPS) December 11, 2019
ಕೇಂದ್ರ ಸರ್ಕಾರ ನಿನ್ನೆ ರಾಜ್ಯಸಭೆಯಲ್ಲಿ ಅನುಮೋದನೆ ಪಡೆದ ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಐಪಿಎಸ್ ಅಧಿಕಾರಿಯೊಬ್ಬರು ತಮ್ಮ ಉದ್ಯೋಗಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಮಸೂದೆಯೂ ಭಾರತೀಯ ಸಂವಿಧಾನದ ಮೂಲಭೂತವಾದ ಸಾರಾಂಶಕ್ಕೆ ವಿರುದ್ಧವಾಗಿದ್ದು ಇದರಿಂದ ನನ್ನ ಮನಸ್ಸಿಗೆ ತುಂಬಾನೆ ನೋವಾಗಿದೆ ಎಂದು ಕಾರಣ ನೀಡಿ ಅವರು ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ.ಇವರು ಮಹಾರಾಷ್ಟ್ರ ಕೇಡರ್‌ನ ಐಪಿಎಸ್ ಅಬ್ದುರ್ ರಹಮಾನ್ ಪ್ರಸ್ತುತ ಮುಂಬೈ (ರಾಜ್ಯ ಮಾನವ ಹಕ್ಕುಗಳ ಆಯೋಗ) ದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಪೌರತ್ವ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಬುಧವಾರ ಅಂಗೀಕರಿಸಿದ್ದರಿಂದ ಅವರು ನಿರಾಶೆಗೊಂಡ ಅವರು ನಾಗರಿಕರ ಹಕ್ಕುಗಳಿಗೆ ಧಕ್ಕೆ ತರುವ ಈ ಮಸೂದೆಯನ್ನು ನಾನು ಖಂಡಿಸುತ್ತೇನೆ. ನಾನು ನನ್ನ ಸೇವೆಯನ್ನು ಇಂದಿಗೆ ಅಂತ್ಯಗೊಒಳಿಸುತ್ತಿದ್ದೇನೆ ಎಂದಿದ್ದಾರೆ ಅಲ್ಲದೆ ನಾನು ನಾಳೆಯಿಂದ ಕರ್ತವ್ಯ ಹಾಜರಾಗುವುದಿಲ್ಲ ಎಂದಿದ್ದಾರೆ,ಮತ್ತು ತಮ್ಮ ರಾಜೀನಾಮೆ ಪತ್ರವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಭಾರತದ ಜಾತ್ಯತೀತತೆಯ ಪರಿಕಲ್ಪನೆಗೆ ಈ ಮಸೂದೆ ವಿರುದ್ಧವಾಗಿದೆ ಈ ಮಸೂದೆಯನ್ನು ವಿರೋಧಿಸಲು ಪ್ರಜಾಪ್ರಭುತ್ವವಾದಿಗಳಿಗೆ ನೆನಪಿಸಲು ಇಚ್ಚಿಸುತ್ತೇನೆ ಎಂದು ತಿಲಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡಿಸಿದ ವಿವಾದಾತ್ಮಕ ಪೌರತ್ವ (ತಿದ್ದುಪಡಿ) ಮಸೂದೆಗೆ ರಾಜ್ಯಸಭೆ ಬುಧವಾರ ಅನುಮೋದನೆ ನೀಡಿದೆ. ಮಸೂದೆಯ ಪರವಾಗಿ 125 ಮತಗಳು ಮತ್ತು ಅದರ ವಿರುದ್ಧ 99 ಮತಗಳನ್ನು ಚಲಾಯಿಸಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ದಲ್ಲಿ ಧಾರ್ಮಿಕ ಕಿರುಕುಳದ ನಂತರ ಭಾರತದಲ್ಲಿ ನಿರಾಶ್ರಿತರಾಗಿ ಭಾರತಕ್ಕೆ ಬಂದಿರುವ ಹಿಂದೂ, ಕ್ರಿಶ್ಚಿಯನ್, ಪಾರ್ಸಿ, ಜೈನ್, ಬೌದ್ಧ ಮತ್ತು ಸಿಖ್ಖರಿಗೆ ಭಾರತೀಯ ಪೌರತ್ವ ನೀಡುವ ಉದ್ದೇಶವನ್ನು ಹೊಂದಿರುವ ಮಸೂದೆಯನ್ನು ವಿರೋಧ ಪಕ್ಷಗಳು ತೀವ್ರವಾಗಿ ವಿರೋಧಿಸುತ್ತಿದ್ದು ಇದರಲ್ಲಿ ನಿರಾಶ್ರಿತ ಮುಸ್ಲಿಂ ಸಮುದಾಯಕ್ಕೆ ತೀವ್ರ ಹಿನ್ನೆಡೆಯಾಗಿದೆ ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ