ಬೆಂಗಳೂರು:
ಸಮ್ಮಿಶ್ರ ಸರ್ಕಾರದ ರೆಸಾರ್ಟ್ ವಾಸ್ತವ್ಯದ ವೇಳೆ ಬಾಟಲಿಯಿಂದ ಹೊಡೆದಾಡಿಕೊಂಡಿದ್ದ ಶಾಸಕ ಆನಂದ್ ಸಿಂಗ್ ಮತ್ತು ಕಂಪ್ಲಿ ಗಣೇಶ್ ಪ್ರಕರಣದ ಕುರಿತು 30 ಪುಟಗಳ ಚಾರ್ಜ್ ಶೀಟ್ ನ್ನು ಬಿಡದಿ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ.
ಗಲಾಟೆ ಸಂದರ್ಭದಲ್ಲಿ ಬಿಡದಿಯ ಈಗಲ್‌ಟನ್ ರೆಸಾರ್ಟ್‌ನಲ್ಲಿದ್ದ 41 ಸಾಕ್ಷಿಗಳ ಹೇಳಿಕೆಗಳನ್ನು ಉಲ್ಲೇಖಿಸಲಾಗಿದೆ. ಈ ವೇಳೆ ಆನಂದ್ ಸಿಂಗ್ ಮತ್ತು ಕಂಪ್ಲಿಗಣೇಶ್ ಇಬ್ಬರೂ ಮದ್ಯಪಾನ ಮಾಡಿದ್ದರು. ಗಲಾಟೆಗೂ ಮುನ್ನ ಯಾವುದೇ ಸಂಚು ಮಾಡಿದ್ದಾಗಲಿ, ಹಲ್ಲೆ ಮಾಡುವ ಉದ್ದೇಶವಾಗಲಿ ಇರಲಿಲ್ಲ. ತಕ್ಷಣ ಪ್ರಚೋದನೆಯಿಂದ ಈ ಗಲಾಟೆ ನಡೆದಿದೆ ಎಂದು ಚಾರ್ಜ್‌ಶೀಟ್‌ನಲ್ಲಿ ಹೇಳಲಾಗಿದೆ.
ಜ.16ರಂದು ರೆಸಾರ್ಟ್‌ನಲ್ಲಿ ಶಾಸಕರ ದಂಡು ವಾಸ್ತವ್ಯ ಹೂಡಿದ್ದ ಸಂದರ್ಭದಲ್ಲಿ ಈ ಗಲಾಟೆ ನಡೆದಿತ್ತು. ಕುಡಿದ ಮತ್ತಿನಲ್ಲಿದ್ದ ಆನಂದ್ ಸಿಂಗ್ ಮತ್ತು ಕಂಪ್ಲಿ ಗಣೇಶ್ ಇಬ್ಬರೂ ಕುತ್ತಿಗೆ ಪಟ್ಟಿ ಹಿಡಿದು ಕೂಗಾಡಿದ್ದರು. ಈ ವಿಡಿಯೋ ವೈರಲ್ ಆಗಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ