ಚಿತ್ರದುರ್ಗ
ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಆರು ಭಾರಿ ಗೆದ್ದಿದ್ದೇನೆ. ಪಕ್ಷ ಸಂಘಟನೆಗೂ ಶ್ರಮಿಸಿದ್ದೇನೆ. ನನ್ನ ರಾಜಕೀಯ ಅನುಭವ, ಹಿರಿತನ ಮತ್ತು ಜಿಲ್ಲೆಯ ಅಭಿವೃದ್ದಿಯ ದೃಷ್ಟಿಯಿಂದ ನನಗೆ ಸಚಿವ ಸ್ಥಾನ ಕೊಡಲೇಬೇಕು
ಇದು ಬಿಜೆಪಿಯ ಹಿರಿಯ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರ ಪ್ರತಿಪಾದನೆ. ಸಚಿವ ಸ್ಥಾನ ಕೇಳುವುದು ನನ್ನ ಹಕ್ಕು. ಇಲ್ಲಿ ಪಕ್ಷಕ್ಕಾಗಿ ಸಾಕಷ್ಟು ಶ್ರಮಿಸಿದ್ದೇನೆ. ಜೊತೆಗೆ ರಾಜಕೀಯ ಅನುಭವವೂ ಇದೆ. ಈ ಕಾರಣಕ್ಕಾಗಿ ಪಕ್ಷದ ವರಿಷ್ಠರ ಬಳಿ ಹಕ್ಕು ಮಂಡಿಸುವುದಾಗಿಯೂ ತಿಪ್ಪಾರೆಡ್ಡಿ ಹೇಳಿದ್ದಾರೆ.
ಭಾನುವಾರ ತಮ್ಮ ನಿವಾಸದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಶಾಸಕರು, ನಾನೊಬ್ಬ ಹಿರಿಯ ಶಾಸಕ. ರಾಜಕೀಯ ಅನುಭವ ಇದೆ. ಜೊತೆಗೆ ಪಕ್ಷ ನಿಷ್ಠೆ ಹೊಂದಿದ್ದೇನೆ. ಈ ನಿಟ್ಟಿನಲ್ಲಿ ಮಂತ್ರಿ ಪದವಿ ನನಗೆ ಕೊಡಲೇಬೇಕು ಎಂದು ಪ್ರತಿಪಾದಿಸಿದರು ಚಿತ್ರದುರ್ಗ ನಗರಸಭೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಅತೀ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲು ಶ್ರಮಿಸಿದ್ದೇನೆ. ಇನ್ನೇನು ಇಲ್ಲಿ ಅಧಿಕಾರವನ್ನೂ ಹಿಡಿಯಲಿದ್ದೇವೆ. ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿಯ ಸರ್ಕಾರವಿದ್ದು, ಜಿಲ್ಲಾ ಕೇಂದ್ರದಲ್ಲಿ ನಾನು ಶಾಸಕನಾಗಿದ್ದೇನೆ. ಜಿಲ್ಲೆಯ ಅಭಿವೃದ್ದಿ ದೃಷ್ಠಿಯಿಂದ ನನಗೆ ಮಂತ್ರಿ ಸ್ಥಾನ ಸಿಗಬೇಕು ಎಂದು ಹೇಳಿದರು
ಜಿಲ್ಲೆಯನ್ನು ಅಭಿವೃದ್ದಿ ಪಡಿಸುವುದು ನನ್ನ ಮುಖ್ಯ ಗುರಿ. ಈ ಕಾರಣಕ್ಕಾಗಿ ಮಂತ್ರಿ ಸ್ಥಾನ ಕೊಟ್ಟರೆ ಅನುಕೂಲವಾಗುತ್ತದೆ ಎಂಬುದು ನನ್ನ ಅನಿಸಿಕೆ. ನನಗೆ ಮಂತ್ರಿ ಹುದ್ದೆ ಕೊಡಿ ಎಂದು ಕೇಳುವುದು ಸಹ ನನ್ನ ಹಕ್ಕು. ಈ ವಿಚಾರವಾಗಿ ಪಕ್ಷದ ಹಿರಿಯ ನಾಯಕರು, ಮುಖ್ಯಮಂತ್ರಿಗಳ ಬಳಿ ಹಕ್ಕು ಮಂಡಿಸುವುದಾಗಿಯೂ ತಿಪ್ಪಾರೆಡ್ಡಿ ಹೇಳಿದರು
ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಬಲವಾಗಿ ಕಟ್ಟಿದ್ದೇನೆ. ಜೊತೆಗೆ ಜಿಲ್ಲೆಯಲ್ಲಿಯೂ ಪಕ್ಷದ ಬೆಳವಣಿಗೆಗೆ ಎಲ್ಲಾ ರೀತಿಯಲ್ಲೂ ಸಹಕರಿಸಿದ್ದೇನೆ. ಜೊತೆಗೆ ಲೋಕಸಭಾ ಚುನಾವಣೆಯಲ್ಲಿಯೂ ಗೆಲುವಿಗೆ ಶ್ರಮಿಸಿದ್ದೇನೆ. ನನ್ನ ಪಕ್ಷ ನಿಷ್ಠೆ ಮತ್ತು ಹಿರಿತನದ ಆಧಾರದ ಮೇಲೆ ಮಂತ್ರಿ ಸಿಗುವ ನಿರೀಕ್ಷೆ ಇದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೆ ನನಗೆ ಭರವಸೆಯೂ ಇದೆ ಎಂದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ