CBSE : 12 ಮತ್ತು 10 ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಪ್ರಕಟ!!

ಹೊಸದಿಲ್ಲಿ: 

       ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ( ಸಿಬಿಎಸ್‌ಇ ) 2020ರ 10 ಮತ್ತು 12ನೇ ತರಗತಿ ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸಿದೆ.

       ಫೆಬ್ರವರಿ 15 ರಿಂದ ಪರೀಕ್ಷೆಗಳು ಆರಂಭವಾಗಲಿದ್ದು, 10ನೇ ತರಗತಿ ಪರೀಕ್ಷೆಗಳು ಫೆಬ್ರವರಿ 15 ರಿಂದ ಶುರುವಾಗಿ ಮಾರ್ಚ್ 20 ರ ವರೆಗೆ ನಡೆಯಲಿವೆ. 12ನೇ ತರಗತಿ ಪರೀಕ್ಷೆಗಳು  ಫೆಬ್ರವರಿ 15 ರಿಂದ ಶುರುವಾಗಿ ಮಾರ್ಚ್‌ 30 ರಂದು ಮುಕ್ತಾಯಗೊಳ್ಳಲಿವೆ ಎಂದು ಮಂಡಳಿ ತಿಳಿಸಿದೆ.

      2020 ರ ಜನವರಿ 1 ರಿಂದ ಫೆಬ್ರವರಿ 7ರವರೆಗೆ ಸಿ.ಬಿ.ಎಸ್.ಇ. ಪ್ರಾಯೋಗಿಕ ಪರೀಕ್ಷೆಗಳು ನಡೆಯಲಿವೆ. cbse.nic.in ವೆಬ್ ಸೈಟ್ ಗೆ ಭೇಟಿ ನೀಡಿ ವೇಳಾಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link