ನವದೆಹಲಿ:
ದೇಶದೆಲ್ಲೆಡೆ ಕಿಚ್ಚು ಹೊತ್ತಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆಗೆ ತಡೆ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೇಶದಾದ್ಯಂತ ಪ್ರತಿಭಟನೆ, ಹಿಂಸಾಚಾರ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ.
ಪೌರತ್ವ ಕಾಯ್ದೆ ಪ್ರಶ್ನಿಸಿ ಈವರೆಗೂ 59 ಅರ್ಜಿಗಳು ದಾಖಲಾಗಿದ್ದು, ಮನವಿಗಳಿಗೆ ಸ್ಪಂದಿಸುವಂತೆ ಕೋರಿ ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ನೋಟಿಸ್ ನೀಡಿದೆ.
ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿರುವ ಸುಪ್ರೀಂಕೋರ್ಟ್, ಕಾಯ್ದೆಗೆ ತಡೆ ನೀಡಲು ನಿರಾಕರಿಸಿದೆ. ಅಲ್ಲದೆ, 2020ರ ಜನವರಿ ಎರಡನೇ ವಾರದೊಳಗಾಗಿ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದ್ದು, ಈ ಕುರಿತ ವಿಚಾರಣೆಯನ್ನು 2020ರ ಜನವರಿ 22ಕ್ಕೆ ಮುಂದೂಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ