ತುಮಕೂರು
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರೋದಿಸಿ ಹಲವು ಸಂಘಟನೆಗಳು ಭಾರತ್ ಬಂದ್ ನಡೆಸಲು ಸಿದ್ದತೆ ನಡೆಸಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲೆಯಲ್ಲಿ ಡಿಸೆಂಬರ್ 18 ರಿಂದ 21ರವರೆಗೆ ದಂಡಪ್ರಕ್ರಿಯಾ ಸಂಹಿತೆ ಕಲಂ 144ರ ಅನ್ವಯ ನಿಷೇದಾಘ್ನೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಪ್ರಗತಿಪರ ನಾಗರಿಕ ಸಂಘಟನೆ ಒಕ್ಕೂಟ, ಸಿ.ಐ.ಟಿ.ಯು, ಸಿ.ಪಿ.ಎಂ, ದಲಿತಪರ ಸಂಘಟನೆ ಮತ್ತು ಇತರೆ ಸಂಘಟನೆಗಳು ಪ್ರತಿಭಟನೆ ನಡೆಸಲು ಸಾದ್ಯತೆಗಳು ಇರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ. ಅದರಂತೆ ಡಿಸೆಂಬರ್ 18ರ ರಾತ್ರಿ 8 ಗಂಟೆಯಿಂದ 21ರ ರಾತ್ರಿ 12 ಗಂಟೆಯವರೆಗೆ ನಿಷೇದಾಘ್ನೆ ಜಾರಿಗೊಳಿ ಸಲಾಗಿದೆ. ಜಿಲ್ಲಾ ಪೊಲೀಸ್ ಅಧಿಕ್ಷಕರ ಕೋರಿಕೆ ಪರಿಗಣಿಸಿ ಸಾರ್ವಜನಿಕ ಸುವ್ಯವಸ್ಥೆ ಕಾಪಾಡಲು ಈ ಆದೇಶ ಹೊರಡಿಸಿರುವುದಾಗಿ ತಿಳಿಸಲಾಗಿದೆ.ನಿಷೇದಾಘ್ನೆ ಅನ್ವಯ 5 ಜನ ಕ್ಕಿಂತ ಹೆಚ್ಚಿನ ಜನ ಗುಂಪುಗಾರಿಕೆ ಮಾಡುವುದು, ಸಭೆ ಸಮಾರಂಭ ನಡೆಸುವುದನ್ನು ನಿಷೇಧಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
