ಬೆಂಗಳೂರು :
ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಮುಸ್ಲಿಂ ಧಾರ್ಮಿಕ ಮುಖಂಡರೊಂದಿಗೆ ಸಭೆ ನಡೆಸಿದ್ದಾರೆ.
ಮುಖ್ಯಮಂತ್ರಿ ಶ್ರೀ @BSYBJP ಅವರನ್ನು ಮುಸ್ಲಿಂ ಸಮುದಾಯದ ಮುಖ್ಯಸ್ಥರ ನಿಯೋಗ ಭೇಟಿ ಮಾಡಿ ಚರ್ಚಿಸಿತು.
ಶಾಸಕ ಎನ್ ಎ ಹ್ಯಾರಿಸ್, ಮುಖ್ಯಮಂತ್ರಿಗಳ ಸಲಹೆಗಾರ ಎಂ ಲಕ್ಷ್ಮೀನಾರಾಯಣ್ ಉಪಸ್ಥಿತರಿದ್ದರು. pic.twitter.com/XYphgkMG2w
— CM of Karnataka (@CMofKarnataka) December 19, 2019
ಸಭೆಯಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಧಾರ್ಮಿಕ ಮುಖಂಡರಿಗೆ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಮನವಿ ಮಾಡಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಮರ್ ಕುಮಾರ್ ಪಾಂಡೆಯನ್ನು ಸಹ ಮಂಗಳೂರಿಗೆ ಕಳುಹಿಸಿಕೊಡಲಾಗಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರುವಂತೆ ಸೂಚನೆ ನೀಡಿದ್ದಾರೆ.
ಸದ್ಯ ತಮ್ಮ ನಿವಾಸ ದವಳಗಿರಿಯಲ್ಲಿರುವ ಅವರು ಅಲ್ಲಿಂದಲೇ ಮಂಗಳೂರು ಹಾಗೂ ರಾಜ್ಯದ ವಿವಿಧ ಭಾಗಗಳ ಪ್ರತಿಭಟನೆ ಹಾಗೂ ಆ ಕುರಿತ ಕ್ಷಣ ಕ್ಷಣದ ಮಾಹಿತಿಯನ್ನು ಪೊಲೀಸ್ ಅಧಿಕಾರಿಗಳಿಂದ ಪಡೆಯುತ್ತಿದ್ದಾರೆ. ಯಾವುದೇ ಅಧಿಕೃತ ಕಾರ್ಯಕ್ರಮ ಹಾಕಿಕೊಳ್ಳದೆ ಪರಿಸ್ಥಿತಿ ಹತೋಟಿಗೆ ಗಮನಹರಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ