ತುಮಕೂರು :
ಮಹಿಳೆಯನ್ನು ಬೇರೆಡೆ ಕೊಲೆ ಮಾಡಿ ನಿರ್ಜನ ಪ್ರದೇಶದಲ್ಲಿ ತಂದು ದುಷ್ಕರ್ಮಿಗಳು ಸುಟ್ಟು ಹಾಕಿರುವ ಘಟನೆ ಕೋರಾ ಪೊಲೀಸ್ ಠಾಣೆ ವ್ಯಾಪ್ತಿಯ ನೆಲಹಾಳ್ ಬಳಿ ನಡೆದಿದೆ.
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ನೆಲಹಾಳ್ ಸಮೀಪದ ನಿರ್ಜನ ಪ್ರದೇಶದಲ್ಲಿ ಮಹಿಳೆಯ ಅರೆಬರೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಸ್ಥಳೀಯರು ನಿರ್ಜನ ಪ್ರದೇಶದಲ್ಲಿ ಹೋದ ವೇಳೆ ಮಹಿಳೆ ಶವ ಪತ್ತೆಯಾಗಿದೆ. ತಕ್ಷಣ ಪೊಲೀಸರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ.
ದುಷ್ಕರ್ಮಿಗಳು ಮಹಿಳೆಯನ್ನು ಬೇರೆಡೆ ಕೊಲೆ ಮಾಡಿ ಇಲ್ಲಿಗೆ ತಂದು ಸುಟ್ಟು ಹಾಕಿದ್ದಾರೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಸದ್ಯ ಈ ಕುರಿತು ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋನ ವಂಶಿ ಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತಕ್ಷಣವೇ ಆರೋಪಿಗಳನ್ನು ಬಂಧಿಸುವುದಾಗಿ ಹೇಳಿದ್ದಾರೆ.
ಹೈದರಾಬಾದ್ ನಲ್ಲಿ ಪಶುವೈದ್ಯೆಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿ ಸುಟ್ಟು ಹಾಕಿರುವ ಘಟನೆ ಬೆನ್ನಲ್ಲೇ ತುಮಕೂರು ಜಿಲ್ಲೆಯಲ್ಲಿ ಅಪರಿಚಿತ ಮಹಿಳೆಯನ್ನು ಹತ್ಯೆ ಮಾಡಿ ಸುಟ್ಟು ಹಾಕಿರುವ ಘಟನೆ ನಡೆದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ