ಮತದಾರರ ಪಟ್ಟಿ ಪರಿಷ್ಕರಣೆ : ಜ.15ರೊಳಗೆ ಆಕ್ಷೇಪಣೆ ಸಲ್ಲಿಸಲು ಸೂಚನೆ

ತುರುವೇಕೆರೆ

    ವಿಧಾನಸಭಾ ಕ್ಷೇತ್ರದಲ್ಲಿ ಮತದಾರಪಟ್ಟಿಯ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು ಸಾರ್ವಜನಿಕರು ಜ.15ರೊಳಗೆ ನಿಗದಿತ ನಮೂನೆಗಳಲ್ಲಿ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಂಬಂಧಿಸಿದ ಆಯಾಯ ಮತಗಟ್ಟೆಗಳ ಬಿಎಲ್‍ಒಗಳನ್ನು ಸಂಪರ್ಕಿಸಿ ಸಲ್ಲಿಸಬಹುದಾಗಿದೆಯೆಂದು ತಹಸೀಲ್ದಾರ್ ಆರ್.ನಯಿಂಉನ್ನೀಸಾ ತಿಳಿಸಿದ್ದಾರೆ.

    ಈ ಅವಧಿಯಲ್ಲಿ ಜನವರಿ 6, 7 ಮತ್ತು 8 ನೆ ದಿನಾಂಕಗಳಂದು ಮಿಂಚಿನ ನೋಂದಣಿ ಕಾರ್ಯಕ್ರಮ ಹಮ್ಮಿಕೊಂಡಿ ದ್ದು ಈ ಮೂರು ದಿನಗಳಂದು ಎಲ್ಲ ಬಿಎಲ್‍ಒಗಳು ಅವರ ಕೇಂದ್ರ ಸ್ಥಾನದಲ್ಲಿರುತ್ತಾರೆ. ಸಾರ್ವಜನಿಕರಿಂದ ಬರುವ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲಿದ್ದಾರೆ. ಈ ಅವಕಾಶವನ್ನು ಸಾರ್ವಜನಿಕರು ಸದುಪಯೋಗಪಡಿಸಿ ಕೊಂಡು ತಮ್ಮ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ತಿಳಿಸಲಾಗಿದೆ ಹಾಗೂ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಗೆ ಅನುಕೂಲವಾಗಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link