ತುಮಕೂರು
ನರೇಂದ್ರ ಮೋದಿ ತುಮಕೂರು ನಾಳೆ ಭೇಟಿ ನೀಡುತ್ತಿದ್ದು ಈ ಭೇಟಿಯನ್ನು ಅನೇಕ ರೈತ ಸಂಘಟನೆಗಳು ಮತ್ತು ಜಿಲ್ಲೆಯ ರೈತರು ವಿರೋಧಿಸಿದ್ದಾರೆ. ನಾಳೆ ಮೋದಿ ಆಗಮಿಸಲಿದ್ದು, ಜನವರಿ 2 ಮತ್ತು 3ರಂದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ನರೇಂದ್ರ ಮೋದಿ ತುಮಕೂರಿಗೆ ಜನವರಿ 2ರಂದು ಭೇಟಿ ನೀಡಲಿದ್ದು ಕಿಸಾನ್ ಸಮ್ಮನ್ ಯೋಜನೆ ಅನುಷ್ಠಾನ ಹಾಗೂ ಕೃಷಿ ಕರ್ಮಣ್ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಬಳಿಕ ರೈತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎನ್ನಲಾಗಿದೆ .
ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.
. ಡಾ. ಸ್ವಾಮಿನಾಥನ್ ವರದಿ ಅನುಷ್ಠಾನಕ್ಕೆ ವಿಳಂಬ ನೀತಿ ಅನುಸರಿಸುತ್ತಿರುವ ಮೋದಿ ಸರ್ಕಾರದ ನಡೆ ಖಂಡಿಸಿ ಪ್ರಧಾನಿ ಕಾರ್ಯಕ್ರಮದ ವೇಳೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ