ಗೂಡ್ಸ್ ರೈಲಿನಲ್ಲಿ ಬೆಂಕಿ ಅವಘಡ

ಕಲಬುರಗಿ:

    ಕಲಬುರಗಿಯಲ್ಲಿ  ಗೂಡ್ಸ್ ರೈಲಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಗರದ ರೈಲ್ವೆ ನಿಲ್ದಾಣದಲ್ಲಿ ಬುಧವಾರ ರಾತ್ರಿ ನಡೆದಿದೆ. ಆದರೆ ಯಾವುದೇ ಪ್ರಾಣಹಾನಿ ಆಗಿಲ್ಲ .ಗೂಡ್ಸ್ ವಾಹನದ ಸಿಬ್ಬಂದಿ ಕೂಡುವ ವಿಶೇಷ ಬೋಗಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಈ ಘಟನೆ ನಡೆದ ವೇಳೆ ಬೋಗಿಯಲ್ಲಿ 6 ಜನ ಸಿಬ್ಬಂದಿಯಿದ್ದರು ಎಂದು ತಿಳಿದುಬಂದಿದೆ.

   ಸದ್ಯ ಎಲ್ಲ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿದೆ ಎಂದು ತಿಳಿಸಿದ್ದಾರೆ  . ಬೆಂಕಿ ಹತ್ತಿದ ತಕ್ಷಣವೇ ಸಿಬ್ಬಂದಿ ಬೋಗಿ ಬಿಟ್ಟು ಹೊರಗೆ ಓಡಿ ಬಂದಿದ್ದಾರೆ. ರೈಲಿನಲ್ಲಿದ್ದ ಕೆಲ ವಸ್ತುಗಳು ಸುಟ್ಟು ಭಸ್ಮವಾಗಿವೆ.ಅಗ್ನಿ ಅವಘಡ  ವೇಳೆ ಗೂಡ್ಸ್ ವಾಹನ ಚಾಲನೆಯಲ್ಲಿ ಇರಲಿಲ್ಲ . ಅಗ್ನಿಶಾಮಕ ದಳ ಸಿಬ್ಬಂದಿ ಸಮಯಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

          ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap