ಇಸ್ಲಾಮಾಬಾದ್:
ಲಾಹೋರ್ ಸಮೀಪವಿರುವ ಗುರುನಾನಕ್ ಅವರ ಜನ್ಮಸ್ಥಳ ನಾನಕಾನ ಸಾಹಿಬ್ ನಲ್ಲಿ ನಡೆದಿದೆ ಎನ್ನಲಾಗಿರುವ ಗುರುದ್ವಾರದ ಮೇಲಿನ ಕಲ್ಲು ತೂರಾಟ ಶುದ್ಧ ಸುಳ್ಳು ಎಂದು ಪಾಕಿಸ್ತಾನ ತಿಳಿಸಿದೆ.
ಪಾಕಿಸ್ತಾನ, ಬಾಂಗ್ಲಾದೇಶದ ಹಾಗೂ ಆಫ್ಘಾನಿಸ್ತಾನದಿಂದ ನಿರಾಶ್ರಿತರಾಗಿ ಬರುವ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವ ಕಾಯ್ದೆ ಕುರಿತು ಭಾರತ ಸೇರಿದಂತೆ ಪಾಕಿಸ್ಥಾನದಲ್ಲಿರವ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ಆಕ್ರೋಶ ಭುಗಿಲೆದ್ದಿರುವ ಸಂದರ್ಭದಲ್ಲಿಯೇ ಪಾಕಿಸ್ತಾನದಲ್ಲಿ ಸಿಖ್ಖರ ಮೇಲೆ ನಡೆದಿರುವ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದೆ. ಪಾಕಿಸ್ತಾನದಲ್ಲಿನ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂಬುದಕ್ಕೆ ಇದಕ್ಕಿಂತ ಹೆಚ್ಚಿನ ಸಾಕ್ಷ್ಯ ಬೇಕೆ? ಎಂದು ಹೇಳಿತ್ತು.