ಬಳ್ಳಾರಿ:
ನಿರ್ದಿಷ್ಟ ಸಮುದಾಯದವರನ್ನು ಗುರುತಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ ಶಾಸಕ ಸೋಮಶೇಖರ ರೆಡ್ಡಿ ಅವರನ್ನು ಸೆಕ್ಷನ್ 153ಎ, 295ಎ ಮತ್ತು 499 ಅಡಿ ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಮುಖಂಡರು ಆಗ್ರಹಿಸಿದರು.
ಜ.6ರಂದು ಬೆಳಿಗ್ಗೆ ನಿಯೋಗ ತೆರಳಿ ಒಂದು ಸಮುದಾಯದ ಬಗ್ಗೆ ಹೀನಾಯವಾಗಿ ಮಾತನಾಡಿದ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು ಎಂದು ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ಒಂದು ಕೋಮಿನವರನ್ನು ಹಿಡಿದು ಅವಹೇಳನಕಾರಿ ಭಾಷಣ ಮಾಡಿರುವುದು ಸರಿಯಲ್ಲ.
ಅವರ ವಿರುದ್ಧ ದೇಶದ್ರೋಹಿ ಪ್ರಕರಣ ದಾಖಲಿಸಬೇಕು. ಕಾಂಗ್ರೆಸ್ ಬೇಕೂಫ್ ಆದರೆ, ಎನ್.ಡಿ.ಎ ಅಲೈನ್ಸ್ ನಲ್ಲಿರುವವರು ಸಿಎಎ ಎನ್ಆರ್ಸಿ ವಿರೋಧಿಸುತ್ತಿದ್ದಾರೆ. ಮತ್ತು ಬೀದಿಗಿಳಿದು ಹೋರಾಟ ಮಾಡುತ್ತಿರುವವರು ಎಲ್ಲರೂ ಬೇವಕೂಫ್ ಗಳಾ? ಎಂದು ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಪ್ರಶ್ನಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ