ಬೆಂಗಳೂರು
ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಆಕ್ರೋಶಗೊಂಡ ಪತಿಯೊಬ್ಬ ಪತ್ನಿಯನ್ನು ತಡೆದು ಚಾಕುವಿನಿಂದ ಇರಿದು ತೀವ್ರ ಹಲ್ಲೆ ನಡೆಸಿ ಪರಾರಿಯಾಗಿದ್ದು ಆತನ ಪತ್ತೆಗೆ ಜ್ಞಾನಭಾರತಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ.ಜ್ಞಾನ ಭಾರತಿಯ ಮಾರುತಿ ನಗರದ ಅಲ್ತಾಪ್ ಪತ್ನಿ ಖಾಜಿ ಮೇಲೆ ಹಲ್ಲೆ ಮಾಡಿದ ಆರೋಪಿಯಾಗಿದ್ದಾನೆ,ಹಲ್ಲೆಯ ಬಳಿಕ ಆರೋಪಿ ಪರಾರಿಯಾಗಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಪತ್ನಿ ಖಾಜಿ ಅಪರಿಚಿತ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಶಂಕೆ ಅಲ್ತಾಫ್‌ಗೆ ಕಾಡುತ್ತಿತ್ತು.ಇದರಿಂದಾಗಿ ಪತ್ನಿಯ ಜೊತೆಗೆ ಆಗಾಗ ಜಗಳ ಮಾಡುತ್ತಿದ್ದ. ಕಳೆದ ಕೆಲ ದಿನಗಳಿಂದ ಇದೇ ವಿಚಾರಕ್ಕೆ ಇಬ್ಬರ ಮಧ್ಯೆ ಗಲಾಟೆ ನಡೆದಿತ್ತು.
ಹೊಸ ವರ್ಷದಂದು ಖಾಜಿಯಾಳ ಹುಟ್ಟುಹಬ್ಬ ಇತ್ತು.ಹೀಗಾಗಿ ಹುಟ್ಟುಹಬ್ಬ ಅಂತ ಖಾಜಿ ತವರು ಮನೆಗೆ ಹೋಗುತ್ತಿದ್ದಳು.ಈ ವೇಳೆ ಬೈಕ್‌ನಲ್ಲಿ ಬಂದ ಅಲ್ತಾಪ್ ಪತ್ನಿ ಖಾಜಿಯಾಳಿಗೆ ಡಿಕ್ಕಿ ಹೊಡೆದು ಕಳೆಗೆ ಬೀಳಿಸಿದ್ದ.ಬಳಿಕ ನಡುರಸ್ತೆಯಲ್ಲೇ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದ.
ಗಂಭೀರವಾಗಿ ಗಾಯಗೊಂಡ ಖಾಜಿಯಾಳನ್ನು ಸಂಬಂಧಿಕರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಈ ಸಂಬಂಧ ಜ್ಞಾನಭಾರತಿ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಗಾಗಿ ಬಲೆ ಬೀಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
