ಆರೋಗ್ಯದ ತರಬೇತಿ ಪಡೆದು ಸಾರ್ವಜನಿಕರಿಗೆ ಅರಿವು ಮೂಡಿಸಿ : ಡಿಹೆಚ್‍ಓ

ತುಮಕೂರು
 
    ಆಯುಷ್ ಇಲಾಖೆ ವತಿಯಿಂದ ನೀಡುತ್ತಿರುವ ಆರೋಗ್ಯದ ಕುರಿತ ತರಬೇತಿಯನ್ನು ಆಶಾ ಕಾರ್ಯಕರ್ತೆಯರು ಪಡೆದು ಸಾರ್ವಜನಿಕರಿಗೆ ಅರಿವು ಮೂಡಿಸಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ||ಬಿ.ಆರ್.ಚಂದ್ರಿಕಾ ಅವರು ತಿಳಿಸಿದರು.
   ಜಿಲ್ಲಾ ಆಯುಷ್ ಕಛೇರಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಛೇರಿ ಸಹಯೋಗದಲ್ಲಿ ಆರೋಗ್ಯ, ತರಬೇತಿ ಮತ್ತು ಐ.ಇ.ಸಿ. ಕಾರ್ಯಕ್ರಮಗಳಡಿ ಎಸ್.ಸಿ.ಪಿ./ಟಿ.ಎಸ್.ಪಿ/ ಸಾಮಾನ್ಯ ವರ್ಗದ ಫಲಾನುಭವಿಗಳಿಗಾಗಿ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿಯಲ್ಲಿಂದು ಏರ್ಪಡಿಸಿದ್ದ “ಜಿಲ್ಲಾ ಮಟ್ಟದ ಆಯುಷ್ ಕಾರ್ಯಗಾರ”ದಲ್ಲಿ ಆಶಾ ಕಾರ್ಯಕರ್ತೆಯರನ್ನುದ್ದೇಶಿಸಿ ಅವರು ಮತನಾಡಿದರು.
    ಜನರಿಗೆ ಆರೋಗ್ಯ ಸೇವೆಯನ್ನು ಒದಗಿಸುವುದು ಆಶಾ ಕಾರ್ಯಕರ್ತೆಯರ ಕರ್ತವ್ಯ. ಸಾಕಷ್ಟು ಜನ ಆಶಾ ಕರ್ಯಕರ್ತೆಯರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಪ್ರತಿಭಟನೆಗಾಗಿ ಸೇವೆಯನ್ನು ಸ್ಥಗಿತಗೊಳಿಸುವುದು ಸರಿಯಲ್ಲ. ನೀವು ಎಂದಿನಂತೆ ಕಾರ್ಯನಿರ್ವಹಿಸಿ ಎಂದು ಆಶಾ ಕಾರ್ಯಕರ್ತೆಯರಿಗೆ ತಿಳಿಸಿದರು.
   ಕಾರ್ಯಗಾರದಲ್ಲಿ ಯೋಗ, ಆಯುರ್ವೇದ, ಹೋಮಿಯೋಪತಿ, ಯುನಾನಿ ಪದ್ದತಿ, ಪಂಚಕರ್ಮ ಚಿಕಿತ್ಸೆಯ  ಕುರಿತು ಮಾಹಿತಿ ತಜ್ಞರು ಉಪನ್ಯಾಸ ನೀಡಿದರು.
   ಕಾರ್ಯಗಾರದಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ|| ಸಂಜೀವ್‍ಮೂರ್ತಿ, ಹಿರಿಯ ವೈದ್ಯಾಧಿಕಾರಿ ಡಾ||ವೆಂಕಟೇಶ್, ಯೋಗತಜ್ಞ ಡಾ||ನಾಗರಾಜು,  ಡಾ|| ಕೇಶವ, ಡಾ||ಪ್ರಕಾಶ್ ಪಾಲ್ತೆ, ಡಾ||ಉದಯ್ ಕುಮಾರ್ ಜೋಷಿ, ಆಶಾ ಕಾರ್ಯಕರ್ತೆಯರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link