ಚಾಮರಾಜನಗರ :
ಶಂಕಿತ ಉಗ್ರರಿಗೆ ಆಶ್ರಯ ನೀಡಿ, ಉಗ್ರರೊಂದಿಗೆ ನಿರಂತರ ಸಂಪರ್ಕ ಹೊಂದಿದ್ದ ಶಂಕೆಯ ಹಿನ್ನಲೆಯಲ್ಲಿ ಇಬ್ಬರು ಮೌಲ್ವಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಉಗ್ರ ಚಟುವಟಿಕೆಯಲ್ಲಿ ತೊಡಗಿದ್ದ ಶಂಕಿತ ಭಯೋತ್ಪಾದಕರೊಂದಿಗೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಕೇರಳದ ಮೂವರು ಶಂಕಿತ ಉಗ್ರರನ್ನು ಭಯೋತ್ಪಾದಕ ನಿಗ್ರಹದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಗುಂಡ್ಲುಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂಧಿಸಲಾಗಿದೆ.
ಗುಂಡ್ಲುಪೇಟೆಯ ಮದರಸಾ ಮೇಲೆ ಜಂಟಿ ಕಾರ್ಯಾಚರಣೆ ನಡೆಸಿದ ಭಯೋತ್ಪಾದನಾ ನಿಗ್ರಹದಳದ ಪೊಲೀಸರು, ಮದರಸದಲ್ಲಿ ಆಶ್ರಯ ಪಡೆದಿದ್ದ ಕೇರಳ ಮೂಲಕ ಮೂವರು ಉಗ್ರರನ್ನು ಬಂಧಿಸಿ, ಇದೀಗ ವಿಚಾರಣೆ ನಡೆಸುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
