ಕೋಲಾರ :
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಂದು ಪತಿ ನೇಣಿಗೆ ಶರಣಾಗಿರುವ ಘಟನೆ ತಾಲೂಕು ಕಮ್ಮಸಂದ್ರ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ.
ಮೋಹನ್ ಹಾಗೂ ಪದ್ಮ ಮೃತ ದಂಪತಿಗಳು. ಕಳೆದ ಆರು ತಿಂಗಳ ಹಿಂದಷ್ಟೇ ಇವರು ಮದುವೆಯಾಗಿದ್ದರು. ಆದರೆ ಶನಿವಾರ ರಾತ್ರಿ ಕ್ಷುಲ್ಲಕ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದು, ಕೋಪದಲ್ಲಿ ಮೋಹನ್ ಪತ್ನಿ ಪದ್ಮಾಗೆ ಹೊಡೆದಿದ್ದಾನೆ.
ಈ ವೇಳೆ ಪ್ರಜ್ಞೆ ತಪ್ಪಿ ಬಿದ್ದ ಪದ್ಮಾ ಅಲ್ಲೇ ಮೃತಪಟ್ಟಿದ್ದಾರೆ. ವಿಷಯ ತಿಳಿದು ಗಾಬರಿಗೊಂಡ ಮೋಹನ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗುತ್ತಿದೆ.ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ