ಬಿಜೆಪಿ ಅಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಮರುಆಯ್ಕೆ!!

ಬೆಂಗಳೂರು:

       ಮುಂದಿನ ಮೂರು ವರ್ಷಗಳ ಅವಧಿಗೆ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನಳೀನ್‍ಕುಮಾರ್ ಕಟೀಲ್ ಇಂದು ಮರು ಆಯ್ಕೆಯಾಗಿದ್ದಾರೆ.

       ಪಕ್ಷದ ನಿಯಮದಂತೆ ಅಧ್ಯಕ್ಷರನ್ನು ಆಯ್ಕೆ ಮಾಡುವಾಗ ಚುನಾವಣೆ ನಡೆಸಬೇಕು. ಇದರಿಂದ ಇಂದು ಚುನಾವಣೆ ಪ್ರಕ್ರಿಯೆ ನಡೆಸಿ ಅಧಿಕೃತವಾಗಿ ಘೋಷಣೆ ಮಾಡಲಾಯಿತು. ಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಇಂದು ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಯಾರೂ ನಾಮಪತ್ರ ಸಲ್ಲಿಸದ ಕಾರಣ ನಾಮಪತ್ರ ಸಲ್ಲಿಸಿದ್ದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ಅವಿರೋಧವಾಗಿ ಆಯ್ಕೆಯಾದರು. 2020ರ ಜನವರಿ 16ರಿಂದ 2023ರ ಜನವರಿ 16ರ ತನಕ ನಳಿನ್ ಕುಮಾರ್ ಕಟೀಲ್ ಅಧಿಕಾರಾವಧಿ ಇರುತ್ತದೆ.

      ರಾಷ್ಟ್ರೀಯ ಸಾಂಸ್ಥಿಕ ಸಹ ಚುನಾವಣಾಧಿಕಾರಿ ಸಿ.ಟಿ ರವಿ ಅವಿರೋಧ ಆಯ್ಕೆ ಘೋಷಣೆ ಮಾಡಿದರು. ನಳಿನ್ ಕುಮಾರ್ ಕಟೀಲ್‍ಗೆ ಪ್ರಮಾಣ ಪತ್ರ ನೀಡಿ ಅಭಿನಂದನೆ ಸಲ್ಲಿಸಲಾಯಿತು.

      ಯಡಿಯೂರಪ್ಪ ಮುಖ್ಯಮಂತ್ರಿಯಾದ ಹಿನ್ನೆಲೆಯಲ್ಲಿ ಒಬ್ಬ ವ್ಯಕ್ತಿಗೆ ಒಂದೇ ಹುದ್ದೆ ನಿಯಮದಂತೆ ಕಟೀಲ್ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ರಾಷ್ಟ್ರೀಯ ನಾಯಕರು ನೇಮಕ ಮಾಡಿದ್ದರು. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರಾದ ಕಟೀಲ್ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಆರ್‍ಎಸ್‍ಎಸ್‍ನ ನಿಷ್ಠಾವಂತ ಕಾರ್ಯಕರ್ತರಾಗಿರುವ ಅವರು ಅಧ್ಯಕ್ಷರಾದ ನಂತರ ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ನೀಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link