ನವದೆಹಲಿ :
ನಿರ್ಭಯಾ ಗ್ಯಾಂಗ್ ರೇಪ್ ಹಾಗೂ ಕೊಲೆ ಪ್ರಕರಣದ ನಾಲ್ವರು ದೋಷಿಗಳಿಗೆ ದೆಹಲಿ ನ್ಯಾಯಾಲಯ ಹೊಸ ಡೆತ್ ವಾರೆಂಟ್ ಜಾರಿ ಮಾಡಿದೆ. ಫೆ.1ರಂದು ಬೆಳಗ್ಗೆ 6 ಗಂಟೆಗೆ ಗಲ್ಲುಶಿಕ್ಷೆ ಫಿಕ್ಸ್ ಮಾಡಿದೆ.
2012 Delhi gang-rape case: A Delhi court issues fresh death warrant for convicts for 1st February, 6 am pic.twitter.com/hHvXo6Av1d
— ANI (@ANI) January 17, 2020
ಪ್ರಕರಣದ ದೋಷಿಗಳಲ್ಲಿ ಒಬ್ಬನಾದ ಮುಖೇಶ್ ಸಿಂಗ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ತಿರಸ್ಕರಿಸಿದ್ದರು. ಇದರ ಬೆನ್ನಲ್ಲೇ ಇಂದು ಪವನ್ ಕುಮಾರ್, ದೆಹಲಿ ಪಟಿಯಾಲ ಕೋರ್ಟ್ ಜಾರಿ ಮಾಡಿರುವ ಡೆತ್ ವಾರಂಟ್ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾನೆ. ಈ ಮಧ್ಯೆ ತಿಹಾರ್ ಜೈಲು ಅಧಿಕಾರಿಗಳು ಅಪರಾಧಿಗಳಿಗೆ ಬ್ಯ್ಲಾಕ್ ವಾರಂಟ್ ಜಾರಿ ಮಾಡುವಂತೆ ಅರ್ಜಿ ಸಲ್ಲಿಸಿದ್ದಾರೆ.
ಕ್ಷಮಾದಾನ ಅರ್ಜಿ ವಜಾಗೊಳಿಸಿದ ಬಳಿಕ 14 ದಿನಗಳ ಕಾಲಾವಕಾಶ ನೀಡಬೇಕು ಎಂಬ ಕಾನೂನು ಇದ್ದಿರುವ ಹಿನ್ನೆಲೆಯಲ್ಲಿ ದೆಹಲಿ ಕೋರ್ಟ್ ಇದೀಗ ನಾಲ್ವರು ಆರೋಪಿಗಳನ್ನು ಫೆ.1ರಂದು ಬೆಳಗ್ಗೆ 6 ಗಂಟೆಗೆ ಗಲ್ಲಿಗೇರಿಸಲು ಹೊಸ ಡೆತ್ ವಾರಂಟ್ ಹೊರಡಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ