ಹೊಸದಿಲ್ಲಿ:
ಭಾರತೀಯ ಜನತಾ ಪಾರ್ಟಿ(ಬಿಜೆಪಿ)ಯ ರಾಷ್ಟ್ರಾಧ್ಯಕ್ಷರಾಗಿ ಜಗತ್ ಪ್ರಕಾಶ್ ನಡ್ಡಾ ಇಂದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜೆ.ಪಿ.ನಡ್ಡಾ ಅವರ ವಿರುದ್ಧ ಯಾರೂ ನಾಮಪತ್ರ ಸಲ್ಲಿಸಲು ಮುಂದಾಗದೇ ಇರುವ ಕಾರಣ ಅವಿರೋಧವಾಗಿಯೇ ಆಯ್ಕೆಯಾಗಲಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ.
Jagat Prakash Nadda elected unopposed as the National President of Bharatiya Janata Party (BJP) pic.twitter.com/ek5PlEZ2sE
— ANI (@ANI) January 20, 2020
ಜೆ.ಪಿ. ನಡ್ಡಾ(58) ಅವರುಪ್ರಧಾನಿ ಮೋದಿ ನೇತೃತ್ವದ ಮೊದಲ ಸರಕಾರದಲ್ಲಿ ಆರೋಗ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಆರೆಸ್ಸೆಸ್ ಜೊತೆ ಉತ್ತಮ ಸಂಬಂಧ ಇಟ್ಟುಕೊಂಡಿರುವ ಹಿನ್ನಲೆಯಲ್ಲಿ ಅವರಿಗೆ ಈ ಹುದ್ದೆ ಒಲಿದು ಬಂದಿದೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/01/JP-nadda.gif)