ಬೆಂಗಳೂರು :
ರಾಜ್ಯದ ಕೆಲ ಪ್ರಮುಖ ದೇವಾಲಯಗಳಲ್ಲಿ ಇನ್ಮುಂದೆ ಜೀನ್ಸ್ , ಟೀ ಶರ್ಟ್ , ತುಂಡುಬಟ್ಟೆ ಧರಿಸಿ ಹೋದರೆ ದೇವರ ದರ್ಶನ ಸಿಗುವುದು ಅನುಮಾನವಾಗಲಿದೆ.
ಈ ಸಂಬಂಧ ಮುಜರಾಯಿ ಇಲಾಖೆ ಸಚಿವರು ಸಭೆ ಕರೆದಿದ್ದು, ಶೀಘ್ರದಲ್ಲಿಯೇ ವಸ್ತ್ರ ಸಂಹಿತೆ ಯಾವ ರೀತಿ ಇರಬೇಕು ಎನ್ನುವ ನಿಯಮವನ್ನು ರೂಪಿಸಲು ಮುಂದಾಗಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ನಾಳೆ ಸಚಿವರ ಸಭೆ ನಡೆಯಲಿದ್ದು, ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಟ್ಟ ಕೆಲ ದೇವಾಲಯಗಳಲ್ಲಿ ಶೀಘ್ರದಲ್ಲೇ ವಸ್ತ್ರಸಂಹಿತೆ ಜಾರಿಯಾಗುವ ನಿರೀಕ್ಷೆ ಇದ್ದು, ಮಹಿಳೆಯರಿಗೆ ಕುರ್ತಾ, ಸೀರೆ ಅಥವಾ ಸಲ್ವಾರ್ ಹಾಗೂ ಪುರುಷರಿಗೆ ಪಂಚೆ, ಶರ್ಟ್ ಕಡ್ಡಾಯಗೊಳಿಸುವ ಸಾಧ್ಯತೆ ಇದೆ.
ಈಗಾಗಲೇ ಕುಕ್ಕೇ ಸುಬ್ರಹ್ಮಣ್ಯ ದೇವಾಲಯದಿಂದ ವಸ್ತ್ರ ಸಂಹಿತೆ ಜಾರಿ ಮಾಡಿ ಎಂದು ಇಲಾಖೆಗೆ ಮನವಿ ಕೂಡ ಮಾಡಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಮುಜರಾಯಿ ಇಲಾಖೆ ಈ ಬಗ್ಗೆ ಗಂಭೀರವಾಗಿ ಚಿಂತಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ