ಬೆಂಗಳೂರು
ಗಣರಾಜ್ಯೋತ್ಸವ ದಿನದಂದು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಗೌರವ ಸಲ್ಲಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ನಿರ್ದೇಶಿಸಿದೆ.
ದೇಶದಲ್ಲಿ ಪ್ರಜಾಪ್ರಭುತ್ವ ಹಾಗೂ ಸಮಾನತೆಗಾಗಿ ಮಹಾತ್ಮ ಗಾಂಧೀಜಿಯಷ್ಟೇ ಸರಿ ಸಮಾನವಾಗಿ ಡಾ.ಬಿ.ಆರ್ ಅಂಬೇಡ್ಕರ್ ಶ್ರಮಿಸಿದ್ದು ಸಂವಿಧಾನ ರಚನೆಯಲ್ಲಿ ಅವರ ಪಾತ್ರ ಹಿರಿದು. ಆದ್ದರಿಂದ ಜನವರಿ 26 ರಂದು ರಾಜ್ಯದ ಎಲ್ಲಾ ಶಾಲಾ – ಕಾಲೇಜುಗಳಲ್ಲಿ ಆಚರಿಸಲಾಗುವ ಗಣರಾಜ್ಯೋತ್ಸವ ಸಮಾರಂಭಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಕಡ್ಡಾಯವಾಗಿ ಗೌರವ ಸಲ್ಲಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ