ಗಣರಾಜ್ಯೋತ್ಸವ:ಸಕಲ ರೀತಿಯಲ್ಲಿ ಸಜ್ಜಾದ ಮಾಣಿಕ್ ಷಾ ಪೆರೆಡ್ ಮೈದಾನ

ಬೆಂಗಳೂರು

    ಗಣರಾಜ್ಯೋತ್ಸವ ಆಚರಣೆಗೆ ನಗರದ ಕಬ್ಬನ್ ರಸ್ತೆಯ ಫಿಲ್ಡ್ ಮಾಷರ್ಲ್ ಮಾಣಿಕ್ಯ ಷಾ ಪೆರೇಡ್ ಮೈದಾನವು ಸಕಲ ರೀತಿಯಲ್ಲಿ ಸಜ್ಜಾಗಿದ್ದು ಪಥಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕಾಗಿ ಕಳೆದ ಒಂದು ವಾರದಿಂದ ತಾಲೀಮು ನಡೆಸಲಾಗಿದೆ ಇದೇ ಪ್ರಥಮ ಬಾರಿಗೆ ಸ್ವಚ್ಛ ಭಾರತ್ ಕುರಿತು ಜನಜಾಗೃತಿ ಮೂಡಿಸಲು ಬಿಬಿಎಂಪಿ ಪೌರಕಾರ್ಮಿಕರಿಂದ ಪಥಸಂಚಲನ ಏರ್ಪಡಿಸಲಾಗಿದೆ.

   ಮೈದಾನದಲ್ಲಿ ಒಂದೆಡೆ ವೇದಿಕೆ ನಿರ್ಮಾಣ, ಆಸನ ವ್ಯವಸ್ಥೆ ಮಾಡಲಾಗುತ್ತಿದೆ. ಇನ್ನೊಂದೆಡೆ ಕೆಎಸ್‌ಆರ್‌ಪಿ, ಸ್ಕೌಟ್ಸ್-ಗೈಡ್ಸ್, ಎನ್‌ಸಿಸಿ, ಸೇವಾದಳ, ವಿವಿಧ ಶಾಲಾ ಮಕ್ಕಳನ್ನು ಸೇರಿ 1,750 ಮಂದಿಯ 44 ತುಕಡಿಗಳು ಪಥಸಂಚಲನ ತಾಲೀಮು ನಡೆಸುತ್ತಿದ್ದಾರೆ. ಪಥ ಸಂಚಲನದಲ್ಲಿ ಭಾಗವಹಿಸಲಿರುವ ಬಿಬಿಎಂಪಿ ಪೌರ ಕಾರ್ಮಿಕರೂ ಪಥ ಸಂಚಲನದ ಅಂತಿಮ ತಾಲೀಮು ನಡೆಸಿದರು.

   ಮೈದಾನದಲ್ಲಿ ಶುಕ್ರವಾರ 44 ತುಕಡಿಗಳಿಂದ ಪಥಸಂಚಲನ ಹಾಗೂ ಕಿಕ್ಕೇರಿ ಕೃಷ್ಣಮೂರ್ತಿ ದೊಡ್ಡವಾಡ ತಂಡದಿಂದ ನಾಡಗೀತೆ ಮತ್ತು ರೈತಗೀತೆಯ ಅಂತಿಮ ಹಂತದ ತಾಲೀಮು ವೀಕ್ಷಿಸಿದ ನಂತರ ನಗರ ಪೊಲೀಸ್ ಆಯುಕ್ತ ಭಾಸ್ಕರರಾವ್ ಅವರ ಜೊತೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಅವರು, ‘ಭಾನುವಾರ ಬೆಳಗ್ಗೆ 8.58ಕ್ಕೆ ರಾಜ್ಯಪಾಲರು ಮೈದಾನಕ್ಕೆ ಆಗಮಿಸಲಿದ್ದಾರೆ. ಬಳಿಕ 9 ಗಂಟೆಗೆ ಧ್ವಜಾರೋಹಣ ನೆರವೇರಿಸಲಿದ್ದು, ಈ ಸಂದರ್ಭದಲ್ಲಿ ವಾಯುಪಡೆಯು ಹೆಲಿಕಾಪ್ಟರ್ ಮೂಲಕ ಪುಪ್ಪವೃಷ್ಟಿ ಮಾಡಲಿದೆ,’ ಎಂದರು.

   ಸಾರ್ವಜನಿಕರಿಗಾಗಿ 4,000 ಆಸನಗಳು, ಅತಿಗಣ್ಯರಿಗೆ 2,000 ಆಸನಗಳು, ಸ್ವಾತಂತ್ರ್ಯ ಹೋರಾಟಗಾರರು, ಗಣ್ಯರು, ರಕ್ಷಣಾ ಇಲಾಖೆ ಅಧಿಕಾರಿಗಳಿಗೆ 2,00 ಆಸನಗಳು, ಇತರೆ ಇಲಾಖೆ ಅಧಿಕಾರಿಗಳು, ನಿವೃತ್ತ ಸೇನಾಧಿಕಾರಿಗಳಿಗಾಗಿ 2,000 ಆಸನಗಳು ಸೇರಿದಂತೆ ಒಟ್ಟು 10,000 ಆಸನ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು

   ಪಥಸಂಚಲನದಲ್ಲಿ ರಾಜ್ಯ ಸೇರಿದಂತೆ ಕೇರಳ ಪೊಲೀಸ್, ಸ್ಕೌಟ್ಸ್, ಗೈಡ್ಸ್, ಎನ್‌ಸಿಪಿ ಹಾಗೂ ಶಾಲಾ ಮಕ್ಕಳು ಒಳಗೊಂಡಂತೆ 44 ತುಕಡಿಗಳಲ್ಲಿ 1750 ಮಂದಿ ಪಾಲ್ಗೊಳ್ಳಲಿದ್ದಾರೆ. ಸುಮಾರು 2 ಸಾವಿರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಂತರ ರಾಜ್ಯಪಾಲರಿಂದ ಸರ್ವೋತ್ತಮ ಸೇವಾ ಪ್ರಶಸ್ತಿ ವಿತರಣೆ ಮತ್ತು ವಿಜೇತರಿಗೆ ಬಹುಮಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎಂ. ಶಿವಮೂರ್ತಿತಿಳಿಸಿದರು.

    ನಾಡಗೀತೆ, ರೈತಗೀತೆ, ಅಮರಭಾರತ್ ಮಹಾನ್, ಕಲ್ಯಾಣ ಕ್ರಾಂತಿ, ಭಾರತ ಭಾಗ್ಯವಿದಾತ, ಮೋಟಾರ್ ಸೈಕಲ್ ಪ್ರದರ್ಶನ, ಬಸ್ ಇಂಟರ್ ವೆನ್ಷನ್ ಕಾರ್ಯಕ್ರಮ ನಡೆಯಲಿದೆ.

ಕ್ಯಾಮೆರಾ ಕಣ್ಗಾವಲು

    ಗಣರಾಜ್ಯೋತ್ಸವ ನಡೆಯಲಿರುವ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಭದ್ರತೆ ಮತ್ತು ಸುರಕ್ಷತೆ ದೃಷ್ಟಿಯಿಂದ 70 ಸಿಸಿ ಕ್ಯಾಮೆರಾ ಹಾಗೂ ಸಂಚಾರ ನಿಯಂತ್ರಣ ವ್ಯವಸ್ಥೆ, ಆಕಸ್ಮಿಕ ವಿಪತ್ತು ನಿರ್ವಹಣೆಗಾಗಿ ಆಂಬ್ಯುಲೆನ್ಸ್‌ಗಳು ವೈದ್ಯಕೀಯೇತರ ಸಿಬ್ಬಂದಿ ಹಲವು ಆಸ್ಪತ್ರೆಗಳಲ್ಲಿ ಸಾಕಷ್ಟು ಸಂಖ್ಯೆಯ ಹಾಸಿಗೆಗಳನ್ನು ಕಾಯ್ದಿರಿಸಿಲಾಗಿದೆ ಎಂದು ಭಾಸ್ಕರರಾವ್ ತಿಳಿಸಿದರು.

    ಮೈದಾನಕ್ಕೆ 75 ಪೊಲೀಸ್ ಅಧಿಕಾರಿ ಹಾಗೂ ಬೆಂಗಳೂರು ನಗರದ ಎಲ್ಲ ವಿಭಾಗಗಳಿಂದ 9 ಡಿಸಿಪಿ, ನೇತೃತ್ವದಲ್ಲಿ 150 ಅಧಿಕಾರಿಗಳು, 943 ಸಿಬ್ಬಂದಿಗಳನ್ನು ಬಂದೋಬಸ್ತ್‌ಗೆ ನಿಯೋಜಿಸಲಾಗಿದೆ. 10 ಕೆಎಸ್‌ಆರ್‌ಪಿ ತುಕಡಿ, 2 ಡಿಸ್ವ್ಯಾಟ್ ತಂಡ, 1 ಕ್ಷಿಪ್ರ ಕಾರ್ಯಾಚರಣೆ ಪಡೆ, ಗರುಡಪಡೆ, ಹಾಗೂ ಕಮಾಂಡ್ ಕಂಟ್ರೋಲ್ ವಾಹನ, ನಿಯೋಜಿಸಲಾಗಿದ್ದು, ಮೈದಾನ ಸಂಪೂರ್ಣ ತಪಾಸಣೆಗೆ ಎಎಸ್.ಚಕ್ ಮೈದಾನದ ಸುತ್ತ ಪರಿವೀಕ್ಷಣೆಗೆ 85 ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ನಿಷಿದ್ಧ ವಸ್ತುಗಳಾದ ಬೆಂಕಿಪೊಟ್ಟಣ, ಕರಪತ್ರ, ಬಣ್ಣ ದ್ರಾವಣ, ವೀಡಿಯೋ, ಸ್ಟಿಲ್ ಕ್ಯಾಮೆರಾ, ನೀರಿನ ಬಾಟಲ್ ಕ್ಯಾನ್, ಶಸ್ತ್ರಾಸ್ತ್ರಗಳ ಮೈದಾನದೊಳಗೆ ತರಲು ನಿಷೇಧಿಸಲಾಗಿದೆ.

    ಬೆಂಕಿ ಅವಘಢ ನಿಭಾವಣೆಗೆ ಅಗತ್ಯ ಸಂಖ್ಯೆಯ ಅಗ್ನಿಶಾಮಕ ವಾಹನ ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅತಿ ಗಣ್ಯ ವ್ಯಕ್ತಿಗಳಿಗೆ 2 ಸಾವಿರ, ಸ್ವಾತಂತ್ರ ಹೋರಾಟಗಾರರು, ರಕ್ಷಣೆ ಇಲಾಖೆಯ ಅಧಿಕಾರಿಗಳು, ಮಾಧ್ಯಮದವರಿಗೆ 2 ಸಾವಿರ, ಇತರ ಇಲಾಖೆಯ ಅಧಿಕಾರಿಗಳು ನಿವೃತ್ತ ಸೇನಾಧಿಕಾರಿಗಳಿಗೆ 2 ಸಾವಿರ, ಸಾರ್ವಜನಿಕರಿಗೆ 4 ಸಾವಿರ ಒಟ್ಟು 10 ಸಾವಿರ ಆಸನಗಳ ವ್ಯವಸ್ಥೆ ಕೈಗೊಳ್ಳಲಾಗಿದೆ.

ಎಲ್ಲೆಡೆ ಪರಿಶೀಲನೆ

   ಮೈದಾನದ ಸಮೀಪದಲ್ಲಿರುವ ಎತ್ತರದ ಕಟ್ಟಡಗಳು, ಕಾಮಗಾರಿ ಸ್ಥಳಗಳನ್ನು ಪರಿಶೀಲನೆ ಮಾಡಲಾಗಿದೆ. ಜತೆಗೆ ನಗರದ ಎಲ್ಲಾ ಪೊಲೀಸ್ ಠಾಣೆಗಳ ಮೂಲಕ ಆಯಾ ವ್ಯಾಪ್ತಿಯಲ್ಲಿನ ರೈಲು ನಿಲ್ದಾಣ, ಹೋಟೆಲ್‌ಗಳು ಸೇರಿದಂತೆ ಎಲ್ಲೆಡೆಯೂ ಪರಿಶೀಲನೆ ನಡೆಸಲಾಗಿದೆ,’ ಎಂದರು.

    ‘ಮೈದಾನದ ನಾಲ್ಕೂ ದ್ವಾರಗಳಲ್ಲೂ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಲಿದ್ದು, ಮೈದಾನದ ಒಳಗೆ ಅಥವಾ ಸುತ್ತಮುತ್ತಲ ಪ್ರದೇಶದಲ್ಲಿ ಯಾವುದೇ ಅನುಮಾನಾಸ್ಪದ ವಸ್ತು, ವ್ಯಕ್ತಿ ಕಂಡು ಬಂದರೆ ಹತ್ತಿರದ ಪೊಲೀಸ್ ಸಿಬ್ಬಂದಿಗೆ ತಿಳಿಸುವಂತೆ ನಿರ್ದೇಶನ ನೀಡಲಾಗಿದೆ’ ಎಂದು ವಿವರಿಸಿದರು

    ಸೆಂಟ್ರಲ್ ಸ್ಟ್ರೀಟ್ ಅನಿಲ್ ಕುಂಬ್ಳೆ ವೃತ್ತದಿಂದ ಶಿವಾಜಿನಗರ ಬಸ್ ನಿಲ್ದಾಣದವರೆಗೆ, ಕಬ್ಬನ್ ರಸ್ತೆ, ಸಿಟಿಓ ವೃತ್ತದಿಂದ ಕೆಆರ್ ರಸ್ತೆ, ಕಬ್ಬನ್ ರಸ್ತೆ ಜಂಕ್ಷನ್, ಎಂ.ಜಿ. ರಸ್ತೆ, ಅನಿಲ್ ಕುಂಬ್ಳೆ ರಸ್ತೆಯಿಂದ ಕ್ವೀನ್ಸ್ ವೃತ್ತದವರೆಗೆ ವಾಹನ ನಿಲುಗಡೆ ನಿಷೇಧಿಸಲಾಗಿದೆ ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link