ಬೆಂಗಳೂರು:
ಪೊಲೀಸ್ ಮಾಹಿತಿದಾರನೋರ್ವನನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಸವೇಶ್ವರ ನಗರ ಬಳಿಯ ಕಮಲಾನಗರದಲ್ಲಿ ನಡೆದಿದೆ. ಪ್ರಭು ಅಲಿಯಾಸ್ ಅಪ್ಪು(27) ಕೊಲೆಯಾದವರು.
ಮೃತರು ಸಿದ್ದೇಶ್ವರ ಕೋ ಆಪರೇಟಿವ್ ಬ್ಯಾಂಕ್ನಲ್ಲಿ ಕೆಲಸ ಮಾಡುತ್ತಿದ್ದರು. ಇದರ ಜೊತೆಗೆ ಪೊಲೀಸ್ ಮಾಹಿತಿ ದಾರರಾಗಿಯೂ ಕೆಲಸ ಮಾಡಿಕೊಂಡಿದ್ದರು. ಶನಿವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಬರುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿಕೊಲೆ ಮಾಡಿದ್ದಾರೆ.

ಕಮಲ ನಗರ, ಕುವೆಂಪು ನಗರದ ಸುತ್ತಮುತ್ತ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ರವಾನಿಸುತ್ತಿದ್ದರು ಎನ್ನಲಾಗಿದೆ. ಒಂದೆರಡು ಬಾರಿ ದರೋಡೆಕೋರರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ ರೆಡ್ ಹ್ಯಾಂಡ್ ಆಗಿ ಹಿಡಿಸಿಕೊಟ್ಟಿದ್ದರು ಎನ್ನಲಾಗಿದೆ.
ಹೀಗಾಗಿ ಹಳೆ ದ್ವೇಷವೇ ಕೊಲೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಬಸವೇಶ್ವರ ನಗರ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಪೊಲೀಸರು ಸುತ್ತ ಮುತ್ತಲಿನ ಸಿಸಿಟಿವಿ ಪರಿಶೀಲನೆ ನಡೆಸುವ ಮೂಲಕ ತನಿಖೆ ಕೈಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾ








