ಪಶ್ಚಿಮ ಬಂಗಾಳ:
ಶಂಕಿತ ಕೊರೊನಾ ವೈರಸ್ ಸೋಂಕಿಗೆ ಒಳಗಾಗಿದ್ದರು ಎನ್ನಲಾದ ಥೈಲ್ಯಾಂಡ್ ಮೂಲದ 32 ವರ್ಷ ವಯಸ್ಸಿನ ಮಹಿಳೆಯೊಬ್ಬರು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮೃತಪಟ್ಟಿದ್ದಾರೆ. ಈ ಮೂಲಕ ಶಂಕಿತ ‘ಕೊರೊನಾ ವೈರಸ್’ಗೆ ಭಾರತದಲ್ಲಿ ಮೊದಲ ಬಲಿ ಇದಾಗಿದೆ.
ಕೊರೊನಾ ವೈರಸ್ ಹೋಲುವ ಲಕ್ಷಣಗಳಾದ ಹೊಟ್ಟೆ ನೋವು, ವಾಕರಿಕೆ ಹಾಗೂ ಜ್ವರದಿಂದ ಬಳಲುತ್ತಿದ್ದ ಥೈಲ್ಯಾಂಡ್ ಮೂಲದ 32 ವರ್ಷ ವಯಸ್ಸಿನ ಮಹಿಳೆಯೊಬ್ಬರು ಜನವರಿ 21ರಂದು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು ಆಗಿದ್ದರು, ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆ ವೈದ್ಯರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಇನ್ನು ಮೃತ ಮಹಿಳೆ ನವೆಂಬರ್ ತಿಂಗಳಲ್ಲೇ ಥೈಲ್ಯಾಂಡ್ನಿಂದ ಹೊರಟು ಪ್ರವಾಸ ಕೈಗೊಂಡಿದ್ದು, ಭಾರತಕ್ಕೆ ಬರುವ ಮೊದಲು ನೇಪಾಳಕ್ಕೆ ಭೇಟಿ ನೀಡಿರುವುದು ತಿಳಿದು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ