ಚಾಮರಾಜನಗರ :
ರಾಜ್ಯದ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಮಲೆ ಮಹದೇಶ್ವರ ದೇವಾಲಯದ ಹುಂಡಿಯಲ್ಲಿ ಈ ಬಾರಿ ದಾಖಲೆಯ ಮೊತ್ತ ಸಂಗ್ರಹವಾಗಿದೆ.
ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಮಂಗಳವಾರ ತಡರಾತ್ರಿಯವರೆಗೂ ಹುಂಡಿ ಕಾಣಿಕೆಯ ಏಣಿಕೆ ಕಾರ್ಯ ನಡೆದಿದ್ದು, ಈ ವೇಳೆ 1.71 ಕೋಟಿ ಹಣ ಸಂಗ್ರಹವಾಗುವುದರ ಮೂಲಕ ಕಳೆದ ವರ್ಷದಂತೆ ಈ ವರ್ಷವೂ ಮಲೆ ಮಹದೇಶ್ವರ ಕೋಟ್ಯಧೀಶನಾಗಿದ್ದಾನೆ ಎನ್ನಲಾಗಿದೆ.
ಹಾಗೇ ನಗದು ಜೊತೆಗೆ 22 ಗ್ರಾಂ ಚಿನ್ನ, 1.40 ಕೆ.ಜಿ. ಬೆಳ್ಳಿಯನ್ನು ಭಕ್ತರು ಕಾಣಿಕೆ ರೂಪದಲ್ಲಿ ಸಮರ್ಪಿಸಿದ್ದಾರೆ. ಅಲ್ಲದೇ ಕಳೆದ ಬಾರಿ 1.39 ಕೋಟಿ ರೂ ಕಾಣಿಕೆ ಸಂಗ್ರಹವಾಗಿತ್ತು.
ವರ್ಷದಿಂದ ವರ್ಷಕ್ಕೆ ಮಲೆ ಮಹದೇಶ್ವರ ದೇವಾಲಯಕ್ಕೆ ಆಗಮಿಸುವ ಭಕ್ತರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಮಾದಪ್ಪನ ಆದಾಯವೂ ಹೆಚ್ಚಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ