ಕಿವಿಸ್ ವಿರುದ್ಧದ 3ನೇ ಪಂದ್ಯ : ಸೂಪರ್ ಓವರ್ ನಲ್ಲಿ ಗೆಲುವು ಸಾಧಿಸಿದ ಟೀಂ ಇಂಡಿಯಾ

ಹಮಿಲ್ಟನ್:

   ಕಿವಿಸ್ ವಿರುದ್ಧದ ಮೂರನೇ ಟಿ20 ಪಂದ್ಯ ಟೈನಲ್ಲಿ ಅಂತ್ಯವಾಗಿದ್ದು ನಂತರದ ಸೂಪರ್ ಓವರ್ ನಲ್ಲಿ ಗೆಲುವು ಸಾಧಿಸುವ ಮೂಲಕ ಟೀಂ ಇಂಡಿಯಾ ಇತಿಹಾಸ ನಿರ್ಮಿಸಿದೆ.

    ಹಮಿಲ್ಟನ್ ನಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಭಾರತ ಮೊದಲು ಬ್ಯಾಟಿಂಗ್ ಮಾಡಿದ್ದು ರೋಹಿತ್ ಶರ್ಮಾರ ಭರ್ಜರಿ ಬ್ಯಾಟಿಂಗ್ ನೆರವಿನಿಂದ 179 ರನ್ ಪೇರಿಸಿತು. 

    ಭಾರತ ನೀಡಿದ 180 ಗುರಿ ಬೆನ್ನಟ್ಟಿದ ನ್ಯೂಜಿಲ್ಯಾಂಡ್ 6 ವಿಕೆಟ್ ನಷ್ಟಕ್ಕೆ 179 ರನ್ ಪೇರಿಸಿದ್ದರಿಂದ ಪಂದ್ಯ ಟೈ ಆಯಿತು. ಇದರಿಂದ ಸೂಪರ್ ಓವರ್ ನೀಡಲಾಯಿತು. ಅದರಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲ್ಯಾಂಡ್ 6 ಎಸೆತಗಳಲ್ಲಿ 17 ರನ್ ಪೇರಿಸಿದ್ದರು. 18 ರನ್ ಗುರಿ ಬೆನ್ನಟ್ಟಿದ ಭಾರತ 20 ರನ್ ಬಾರಿಸಿ ಗೆಲುವಿನ ನಗೆ ಬೀರಿತು. ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ ಮಾಡಿ ಕೊನೆಯ ಎರಡು ಎಸೆತಗಳಲ್ಲಿ 2 ಸಿಕ್ಸರ್ ಬಾರಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. 

 

    ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ಅದಾಗಲೇ ಎರಡು ಪಂದ್ಯಗಳನ್ನು ಗೆದ್ದುಕೊಂಡಿದೆ. ಇಲ್ಲಿಯವರೆಗೂ ನ್ಯೂಜಿಲ್ಯಾಂಡ್ ನಲ್ಲಿ ಭಾರತ ಒಂದೇ ಒಂದು ಟಿ20 ಸರಣಿಯನ್ನು ಗೆದ್ದಿರಲಿಲ್ಲ. ಆದರೆ ಕೊಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ಮೊದಲ ಬಾರಿಗೆ ಸರಣಿ ಗೆದ್ದು ಇತಿಹಾಸ ನಿರ್ಮಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ