ಕೇಂದ್ರ ಬಜೆಟ್ 2020 : ದೇಶದ ಪ್ರತಿ ಜಿಲ್ಲೆಗೂ ಮೆಡಿಕಲ್​ ಕಾಲೇಜ್​!!

ನವದೆಹಲಿ:

      ಕೇಂದ್ರ ಸರ್ಕಾರ 2020-21ನೇ ಸಾಲಿನ ಬಜೆಟ್​ ಮಂಡನೆ ಮಾಡುತ್ತಿದ್ದು, ಆರೋಗ್ಯ ಕ್ಷೇತ್ರಕ್ಕೆ ಒತ್ತು ನೀಡಲಾಗಿದ್ದು ಪ್ರತಿ ಜಿಲ್ಲೆಗೆ ಒಂದರಂತೆ ಮೆಡಿಕಲ್​ ಕಾಲೇಜ್​ ಸ್ಥಾಪನೆ ಮಾಡುವ ಉದ್ದೇಶವನ್ನು ಹೊಂದಿದೆ.

      ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದ ನಂತರ ಮೊದಲ ಬಾರಿಗೆ ಮಂಡಿಸುತ್ತಿರುವ ಸಂಪೂರ್ಣ ಬಜೆಟ್​ ಇದಾಗಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಲೋಕಸಭೆಯಲ್ಲಿ ಬಜೆಟ್​ ಮಂಡನೆ ಮಾಡುತ್ತಿದ್ದಾರೆ.

       ತಮ್ಮ ಬಜೆಟ್‌ ಮಂಡನೆ ವೇಳೆ ಆರೋಗ್ಯ ವಲಯಕ್ಕೆ ₹69 ಸಾವಿರ ಕೋಟಿ ಅನುದಾನ ನೀಡಲಾಗುವುದು ಹಾಗು ಪ್ರತಿ ಜಿಲ್ಲೆಗೆ ಒಂದರಂತೆ ಮೆಡಿಕಲ್​ ಕಾಲೇಜ್​ ಸ್ಥಾಪನೆ ಮಾಡುವ ಉದ್ದೇಶ ಹೊಂದಿದೆ ಅಂತ ಹೇಳಿದರು. ಇದಲ್ಲದೇ ದೇಶಾದ್ಯಂತೆ ಹೊಸದಾಗಿ 112 ಆಸ್ಪತ್ರೆಗಳ ನಿರ್ಮಾಣ ಮಾಡಲಾಗುವುದು ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link